Home ದೇಶ-ವಿದೇಶ ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿಗೆ ಮುಖಭಂಗ..!

ಸುಪ್ರೀಂ ಕೋರ್ಟ್​ನಲ್ಲಿ ಮಮತಾ ಬ್ಯಾನರ್ಜಿಗೆ ಮುಖಭಂಗ..!

ನವದೆಹಲಿ: ಶಾರದಾ ಚಿಟ್​ ಫಂಡ್​ ಕೇಸ್​ ಆರೋಪಿ ರಾಜೀವ್​ನ್ನು 7 ದಿನಗಳ ನಂತರ ಬಂಧಿಸಬಹುದು ಅಂತ ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ. ಕೊಲ್ಕತ್ತಾ ಮಾಜಿ ಪೊಲೀಸ್​ ಆಯುಕ್ತ ರಾಜೀವ್​ನ್ನು ರಕ್ಷಿಸಲು ಪ್ರಯತ್ನಿಸಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗವಾಗಿದೆ.

ಶಾರದಾ ಚಿಟ್​ಫಂಡ್​ ಹಗರಣದ ತನಿಖೆ ನಡೆಸುತ್ತಿದ್ದ ಸಂದರ್ಭ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ರಾಜೀವ್ ಎದುರಿಸುತ್ತಿದ್ದು, 7 ದಿನಗಳ ನಂತರ ಸಿಬಿಐ ಅವರನ್ನು ಬಂಧಿಸಬಹುದು ಅಂತ ಸುಪ್ರೀಂ ಹೇಳಿದೆ. ರಾಜೀವ್​ ಕುಮಾರ್​ಗೆ ಫೆಬ್ರವರಿ 5ರಂದು ನೀಡಲಾಗಿದ್ದ ರಕ್ಷಣೆ ಮುಂದಿನ 7 ದಿನಗಳ ಕಾಲ ಇರಲಿದ್ದು, ನಂತರ ಸಿಬಿಐ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬಹುದು ಅಂತ ಕೋರ್ಟ್ ಹೆಳಿದೆ. ರಾಜೀವ್ ಬಂಧನವನ್ನು ಮಮತಾ ಬ್ಯಾನರ್ಜಿ ವಿರೋಧಿಸಿದ್ದರು. ರಾಜೀವ್​ ಕುಮಾರ್​ ಶಾರದಾ ಚಿಟ್​ಫಂಡ್​ ಕೇಸ್​ನ ಎಸ್​ಐಟಿ ತನಿಖೆ ಮುಖ್ಯಸ್ಥರಾಗಿದ್ದರು. ಈ ವೇಳೆ ಮೂಲ ದಾಖಲೆಗಳು, ಸಾಕ್ಷ್ಯ ನಾಶ ಮಾಡಿದ ಆರೋಪ ರಾಜೀವ್​ ಮೇಲಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments