Home ದೇಶ-ವಿದೇಶ ಇನ್ಮುಂದೆ ಕನ್ನಡದಲ್ಲೂ ಬ್ಯಾಂಕಿಂಗ್​ ಎಕ್ಸಾಮ್..!

ಇನ್ಮುಂದೆ ಕನ್ನಡದಲ್ಲೂ ಬ್ಯಾಂಕಿಂಗ್​ ಎಕ್ಸಾಮ್..!

ದಶಕಗಳ ಕನ್ನಡಿಗರ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ. ಇನ್ಮುಂದೆ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯುವ ಅವಕಾಶ ಇದೆ. ಇದನ್ನು ಸಂಸತ್​ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಘೋಷಿಸಿದ್ದಾರೆ. ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. 

ಈವರೆಗೆ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಯುತ್ತಿತ್ತು. ಉತ್ತರಭಾರತದ ಅಭ್ಯರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತಿತ್ತು. ಆದ್ರೆ, ಕನ್ನಡ ಭಾಷೆಯಲ್ಲಿ ಪರೀಕ್ಷೆ ಇಲ್ಲದೇ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗುತ್ತಿದ್ದರು. ಇತ್ತೀಚಿಗೆ ಸಂಸತ್ತಿನಲ್ಲೂ ಈ ವಿಚಾರ ಮಾರ್ದನಿಸಿತ್ತು. 2014ರಲ್ಲಿ ಐಬಿಪಿಎಸ್​ ವತಿಯಿಂದ ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿ ಕೇಂದ್ರಿಕೃತ ಪರೀಕ್ಷೆ ನಡೆಯುತಿತ್ತು. ಅದಕ್ಕೂ ಈ ಹೊಸ ನಿಯಮದಿಂದ ಎಲ್ಲ ರಾಜ್ಯಗಳಲ್ಲೂ ಆಯಾ ರಾಜ್ಯ ಭಾಷೆಯಲ್ಲಿ ಓದಿದವರಿಗೆ ನೇಮಕಾತಿಯಲ್ಲಿ ನ್ಯಾಯ ಸಿಗಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments