ಹೆದ್ದಾರಿಗಳಲ್ಲಿ ಹೊತ್ತಿದ ಅನ್ನದಾತರ ಕಿಚ್ಚು..!

0
133

ಬೆಂಗಳೂರು: ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ 8 ಕಡೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರೈತರ ಹೋರಾಟ ನಡೆಯುತ್ತಿದ್ದು, ಪ್ರಯಾಣಿಕರು ರಸ್ತೆಗೆ ಇಳಿಯುವ ಮುನ್ನ ಎಚ್ಚರಿಕೆ ವಹಿಸಬೇಕಾಗಿದೆ. ಬೊಮ್ಮಸಂದ್ರ, ದೇವನಹಳ್ಳಿ ಟೋಲ್ ಎಂಟ್ರೆನ್ಸ್‌, ಚಿಕ್ಕಬಳ್ಳಾಪುರ ಟೋಲ್ ಎಂಟ್ರೆನ್ಸ್, ತುಮಕೂರು, ಕೋಲಾರ, ಚಿತ್ರದುರ್ಗ, ಅನೇಕಲ್, ಹಾವೇರಿ ಬಳಿ ಹೈವೇಯಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯದ ರೈತ ಸಂಘ, ಹಸಿರು ಸೇನೆ ಸೇರಿ ಹಲವು ರೈತರ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದೆ.

ಸರ್ಕಾರ 2013ರಲ್ಲಿ ಭೂ ಸ್ವಾಧೀನ ಕಾಯ್ದೆ ಜಾರಿಗೆ ತಂದಿತ್ತು. ಕಾಯ್ದೆ ಪ್ರಕಾರ ರೈತರ ಅನುಮತಿ ಪಡೆದು ಭೂಸ್ವಾಧೀನ ಮಾಡಿ ಅವರಿಗೆ ನೀಡಿದ ಹಣ ತೃಪ್ತಿಕರವಾಗಿರಬೇಕು. ಒಂದು ವೇಳೆ ರೈತರಿಗೆ ನೀಡಿದ ಹಣ ತೃಪ್ತಿಕರವಾಗಿರದಿದ್ದರೆ ಕೋರ್ಟ್ ಮೊರೆ ಹೋಗಬಹುದು. ಆದರೆ ಈಗ ಈ ಕಾಯ್ದೆಯನ್ನು ಸರ್ಕಾರ ಬದಲಾವಣೆ ಮಾಡಿದೆ. ಇದರಲ್ಲಿ ಸಾಲ ಮನ್ನಾದ ಬಗ್ಗೆ ಸ್ಪಷ್ಟ ಚಿತ್ರಣವಿಲ್ಲದಿರುವುದು, ಬರಗಾಲದ ಸಮಸ್ಯೆ ನೀಗಿಸುವಲ್ಲಿ ಸರ್ಕಾರ ವಿಫಲವಾಗಿರುವುದು, ಸರ್ಕಾರದ ವಿಫಲತೆ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಗಲಕೋಟೆ: ಜಿಲ್ಲೆ ಹುನಗುಂದ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ತಡೆದು ರೈತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ರಾ. ಹೆದ್ದಾರಿ 50ರಲ್ಲಿ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ರೈತರು ಬೆಳಗ್ಗೆ 6 ಗಂಟೆಗೆ ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿ ಬಂದ್​​ ಮಾಡಲಾಗಿದೆ. ನೆಲಮಂಗಲದ ಜಾಸ್ ಟೋಲ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಎನ್.ಎಚ್7 ಚದಲಪುರ ಬೈಪಾಸ್​​ನಲ್ಲಿ ಪ್ರತಿಭಟನೆಗೆ ಸಕಲ ತಯಾರಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಬೈಪಾಸ್ ಬೆಂಗಳೂರು ಹೈದರಾಬಾದ್ ಸಂಪರ್ಕ ಕಲ್ಪಿಸುತ್ತದೆ. ವಾಹನ ಸವಾರರಿಗೆ ಚಿಕ್ಕಬಳ್ಳಾಪುರ ನಗರದ ಮೂಲಕ ಸಂಚಾರಕ್ಕೆ ಅವಕಾಶ ಮಾಡಲಾಗಿದೆ. ವಾಹನ ಸವಾರರಿಗೆ ತೊಂದರೆಯಾಗದಂತೆ ಚಿಕ್ಕಬಳ್ಳಾಪುರ ಪೊಲೀಸರು ಕ್ರಮ ವಹಿಸಿದ್ದಾರೆ.

LEAVE A REPLY

Please enter your comment!
Please enter your name here