ರಾಜಧಾನಿಯಲ್ಲಿ ರೈತರ ಪ್ರತಿಭಟನೆ

0
174

ಬೆಂಗಳೂರು: ರಾಜಧಾನಿಗೆ ಬಂದಿಳಿದ ರೈತರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಫ್ರೀಡಂಪಾರ್ಕ್‌ನಲ್ಲಿ ನೆರೆದ ನೂರಾರು ರೈತರು ಹಲವು ಬೇಡಿಕೆಗಳ ಈಡೇರಿಕೆಗೆ  ಆಗ್ರಹಿಸಿದ್ದಾರೆ. ‘ಮಹದಾಯಿ’ ಜಾರಿ, ಬರಪೀಡಿತ ಪ್ರದೇಶಕ್ಕೆ ನೀರು ಒದಗಿಸುವುದು, ರೈತರ ಸಂಪೂರ್ಣ ಸಾಲಮನ್ನಾ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸಭೆ ಕಲಾಪ ಆಡಿಯೋ ವಾರ್​ನಲ್ಲೇ ಮುಗಿಯುತ್ತಿರುವುದರ ಬಗ್ಗೆ ಪವರ್​ಟಿವಿ ನಿನ್ನೆ ವರದಿ ಮಾಡಿತ್ತು. ರಾಜ್ಯದ ರೈತರ ಸಮಸ್ಯೆ, ಬರಗಾಲದ ಬಗ್ಗೆ ಕಲಾಪದಲ್ಲಿ ಚರ್ಚೆಯಾಗದ ಕುರಿತು ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಬರಗಾಲ ಪೀಡಿತ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಇದ್ದು, 156 ತಾಲೂಕುಗಳು ಬರಗಾಲ ಸಮಸ್ಯೆಯನ್ನು ಎದುರಿಸುತ್ತಿವೆ. ಬರ ಪೀಡಿತ ಪ್ರದೇಶಗಳ ಪ್ರವಾಸ ಇನ್ನೂ ಆಗಿಲ್ಲ. ಬರೀ ಆಡಿಯೋ ಕುರಿತ ಚರ್ಚೆಯಲ್ಲೇ ರಾಜ್ಯ ಸರ್ಕಾರ ಕಾಲಹರಣ ಮಾಡ್ತಿದೆ ಅಂತ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.

LEAVE A REPLY

Please enter your comment!
Please enter your name here