ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ಕೊರೋನಾ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಗಾ ಇಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹೊರ ದೇಶಗಳಿಂದ ಬರುವವರ ಮೇಲೆ ನಿಗಾ ಇಡಲಾಗಿದೆ. ಯುರೋಪ್ ದೇಶಗಳಿಂದ ಬಂದವರಿಗೆ ಆರ್ ಟಿಪಿಸಿ ಟೆಸ್ಟ್ ಕಡ್ಡಾಯವಾಗಿ ಮಾಡಿಸಲಾಗುತ್ತದೆ. ಈಗಾಗಲೇ ರಾಜ್ಯಕ್ಕೆ ಬಂದು ಇಳಿದವರನ್ನು ಕಂಡುಹಿಡಿಯಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೊರೋನ ಇರುವ ಹಿನ್ನಲೆ ರಾಜ್ಯದಲ್ಲಿ ಹೊಸ ವರ್ಷ ಆಚರಣೆ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದೆ. ಹೊಸವರ್ಷಾಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ ಮಾಡಲಾಗುತ್ತದೆ ಎಂದು ಬೆಂಗಳೂರಿನಲ್ಲಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.