Home ರಾಜ್ಯ ಮೈಸೂರು ಯುವಕನ ಎದುರೇ ಪ್ರೇಯಸಿ ಮೇಲೆ ಅತ್ಯಾಚಾರ

ಯುವಕನ ಎದುರೇ ಪ್ರೇಯಸಿ ಮೇಲೆ ಅತ್ಯಾಚಾರ

ಮೈಸೂರು: ರಾಯಚೂರು ಘಟನೆ ಮರೆಯುವ ಮೊದಲೇ ಮೈಸೂರಲ್ಲೂ ಕೀಚಕ ಕೃತ್ಯ ನಡೆದಿದೆ. ಮೈಸೂರು ಹೊರವಲಯದಲ್ಲಿ ಯುವಕನ ಎದುರೇ ಪ್ರೇಯಸಿ ಮೇಲೆ ಅತ್ಯಾಚಾರ ಮಾಡಿರೋ ಘಟನೆ ಬೆಳಕಿಗೆ ಬಂದಿದೆ. ಮೈಸೂರಿನ ಹೊರವಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ ಅಂತ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹೇಳಿದ್ದಾರೆ.

“ಎಎಸ್​​ಪಿ ನೇತೃತ್ವದಲ್ಲಿ 8 ತಂಡಗಳನ್ನು ರಚನೆ ಮಾಡಿ ಆರೋಪಿಗಳಿಗೆ ಬಲೆ ಬೀಸಲಾಗಿದೆ. ಕೃತ್ಯದ ವೇಳೆ ಮೂರ್ನಾಲ್ಕು ಮಂದಿ ಇದ್ದರು ಎಂದು ಹೇಳಿಕೆಯಿಂದ ತಿಳಿದುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದೇವೆ. ಪರಿಚಿತರಿಗೆ ಹಣ ಕೊಡಲು ತೆರಳಿದ್ದ ವೇಳೆ ಮೂತ್ರ ವಿಸರ್ಜನೆಗೆ ಬೈಕ್ ನಿಲ್ಲಿಸಿದ್ದರು. ಈ ಸಂದರ್ಭ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಲಿನ‌ ಮೇಲೆ ಕಲ್ಲುನ್ನು ಎತ್ತಿ ಹಾಕಿ ಯುವಕನಿಗೆ ಹಲ್ಲೆ ಮಾಡಲಾಗಿದೆ. ಹಣೆ ಭಾಗದಲ್ಲಿಯೂ ಗಾಯವಾಗಿದೆ. ಅಸ್ವಸ್ಥ ಪ್ರೇಮಿಗಳಿಗೆ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ” ಅಂತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments