ನವದೆಹಲಿ: ಭಾರಿ ಅಗ್ನಿ ಅವಘಡದಿಂದ 45 ಮಂದಿ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ದೆಹಲಿಯ ಫಿಲ್ಮಿಸ್ತಾನ್ ಪ್ರದೇಶದಲ್ಲಿ ನಡೆದಿದೆ.
ಝಾನ್ಸಿ ರಾಣಿ ರಸ್ತೆಯ ಮಾರುಕಟ್ಟೆಯಲ್ಲಿರುವ ಮೂರು ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸುಮಾರು 30 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ. ಅವಘಡದಿಂದ 45 ಮಂದಿ ದುರ್ಮರಣ ಹೊಂದಿದ್ದು, 22ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 64ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.