ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಭಜರಂಗಿ 2’ ಸಿನಿಮಾ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಮೋಹನ್ ಬಿ. ಕೆರೆ ಸ್ಟುಡಿಯೋದಲ್ಲಿ ಚಿತ್ರೀಕರಣಕ್ಕಾಗಿ ಸುಮಾರು 1 ಕೋಟಿ ವೆಚ್ಚದಲ್ಲಿ ಗುಹೆ ಸೆಟ್ಟನ್ನು ಹಾಕಲಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಸೆಟ್ ಭಸ್ಮವಾಗಿದೆ.
ನಟ ಶಿವರಾಜ್ ಕುಮಾರ್ ಸೇರಿದಂತೆ ಸುಮಾರು 300 ಮಂದಿ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸೆಟ್ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಸೆಟ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವ್ದೇ ಪ್ರಾಣಾಪಾಯ ಸಂಭವಿಸಿಲ್ಲ.
zithromax for strep
zithromax 250