Home ದೇಶ-ವಿದೇಶ ಸೈರಾ ಶೂಟಿಂಗ್​ ಸೆಟ್​ನಲ್ಲಿ ಬೆಂಕಿ..!

ಸೈರಾ ಶೂಟಿಂಗ್​ ಸೆಟ್​ನಲ್ಲಿ ಬೆಂಕಿ..!

ಹೈದರಾಬಾದ್​: ಸೈರಾ ಚಿತ್ರದ ಶೂಟಿಂಗ್​ ಸೆಟ್​ನಲ್ಲಿ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ. ಸ್ವಾತಂತ್ರ್ಯಹೋರಾಟಗಾರ ನರಸಿಂಹ ರೆಡ್ಡಿ ಬಯೋಪಿಕ್​ ಸುರೇಂದ್ರ ರೆಡ್ಡಿ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದೀಗ ಎರಡನೇ ಬಾರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ.

ಶೂಟಿಂಗ್ ಸ್ಥಳದಲ್ಲಿ ನಡೆದ ಬೆಂಕಿ ಅವಘಡಕ್ಕೆ ಸೆಟ್​ ಭಸ್ಮವಾಗಿದೆ. ಕೊಕಾಪೇಟ್​ನಲ್ಲಿ ನಡೆಯುತ್ತಿದ್ದ ಸೈರಾ ಚಿತ್ರದ ಶೂಟಿಂಗ್​​ ಸೆಟ್​ನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಅಲ್ಲು ಅರವಿಂದ್​ ಒಡೆತನದ ಫಾರ್ಮ್​ ಹೌಸ್​ನಲ್ಲಿ ಸೆಟ್​ ಹಾಕಲಾಗಿತ್ತು. ಶೂಟಿಂಗ್​ ಮುಗಿದ ಬಳಿಕ ಎಲ್ಲರೂ ಸೆಟ್​ನಿಂದ ತೆರಳಿದ್ದರು. ಸೆಕ್ಯುರಿಟಿಯವರಷ್ಟೇ ಸೆಟ್​ನಲ್ಲಿದ್ದರು. ಬೆಳಕಿನ ಜಾವ ಬೆಂಕಿ ಹೊತ್ತಿಕೊಂಡಿದೆ. ಇದು ಸೈರಾ ಚಿತ್ರದ ಶೂಟಿಂಗ್​ ವೇಳೆ ನಡೆದಿರುವ 2ನೇ ಬೆಂಕಿ ಅವಘಡವಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ತೆಲುಗು, ಮಲೆಯಾಳಂ ಮತ್ತು ತಮಿಳು ಭಾಷೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು ಚಿರಂಜೀವಿ, ಅಮಿತಾಭ್​ ಬಚ್ಚನ್​, ಜಗಪತಿ ಬಾಬು, ನಯನತಾರಾ, ತಮನ್ನಾ ಸೇರಿ ಪ್ರಮುಖರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ನಟ ಚಿರಂಜೀವಿ ನರಸಿಂಹರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments