Home ದೇಶ-ವಿದೇಶ ಫ್ರಾನ್ಸ್​ನಿಂದ ಭಾರತಕ್ಕೆ ಹೊರಟ 5 ರಫೆಲ್ ವಿಮಾನಗಳು ..!

ಫ್ರಾನ್ಸ್​ನಿಂದ ಭಾರತಕ್ಕೆ ಹೊರಟ 5 ರಫೆಲ್ ವಿಮಾನಗಳು ..!

ಪ್ಯಾರಿಸ್ : ಫ್ರಾನ್ಸ್​ನಿಂದ ಭಾರತಕ್ಕೆ ಮೊದಲ ಹಂತದ 5 ರಫೆಲ್ ಯುದ್ಧ ವಿಮಾನಗಳು ಟೇಕಾಫ್ ಆಗಿವೆ.

ಭಾರತಕ್ಕೆ ಹೊರಟಿರುವ ಯುದ್ಧ ವಿಮಾನಗಳು ಯುಎಇನಲ್ಲಿನ ಫ್ರಾನ್ಸ್​ ವಾಯುನೆಲೆಯಲ್ಲಿ ಇಂಧನ ತುಂಬಿಸಿಕೊಳ್ಳಲಿವೆ. ಜುಲೈ 29ರಂದು ಹರಿಯಾಣದ ಅಂಬಾಲ ವಾಯುನೆಲೆಗೆ ಬರಲಿವೆ.

ಒಟ್ಟು 36 ವಿಮಾನಗಳಲ್ಲಿ ಮೊದಲ  ಹಂತದಲ್ಲೀಗ 5 ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ.

ಜುಲೈ 29ರಂದೇ ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ಅವುಗಳ ಹಾರಾಟ ಪರೀಕ್ಷೆ ನಡೆಯಲಿದೆ.  IAF ಸಿಬ್ಬಂದಿಗೆ ರಫೆಲ್​​ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬಳಕೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ ತ್ವರಿತವಾಗಿ ಅದರ ಹಾರಾಟ ತರಬೇತಿಗೆ ವ್ಯವಸ್ಥೆ ಮಾಡಲಾಗ್ತಿದೆ ಅಂತ ವಿಂಗ್​ ಕಮಾಂಡರ್ ಇಂದ್ರಾನಿಲ್​​ ನಂದಿ ತಿಳಿಸಿದ್ದಾರೆ.

ಭಾರತ ಫ್ರಾನ್ಸ್​​ನ  ಡಸಾಲ್ಟ್ ಸಂಸ್ಥೆಯಿಂದ 36 ರಫೆಲ್​​ ಯುದ್ಧ ವಿಮಾನಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದು, ಅದರ ಭಾಗವಾಗಿ 5 ವಿಮಾನಗಳು ಭಾರತಕ್ಕೆ ಬರುತ್ತಿವೆ. ಮೊದಲ ಹಂತದಲ್ಲಿ ಬರುತ್ತಿರೋ 5 ವಿಮಾನಗಳು ಅಂಬಾಲಾ ವಾಯುನೆಲೆಗೆ ಆಗಮಿಸಲಿದ್ದು, ಮುಂದಿನ ಹಂತದಲ್ಲಿ ಬರುವ ಮತ್ತೊಂದು ಸ್ಕ್ವಾಡ್ರನ್ ಪಶ್ಚಿಮ ಬಂಗಾಳದಲ್ಲಿ ನಿಯೋಜನೆಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಹುಣಸೋಡು ಬ್ಲ್ಯಾಸ್ಟ್ ಪ್ರಕರಣ-ಮೃತಪಟ್ಟ ಐದು ಮಂದಿಯ ಗುರುತು ಪತ್ತೆ

ಶಿವಮೊಗ್ಗ: ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ  6  ಜನರು ಮೃತರಾಗಿರುವುದು ತಿಳಿದು ಬಂದಿದ್ದು, 5  ಜನರ ಮೃತ ದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗದ ಪವನ್ ಕುಮಾರ್ (29) ಜಾವೀದ್...

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

Recent Comments