ಮಧ್ಯಪ್ರದೇಶ: ಡೆಡ್ಲಿ ಕೋರೋನಾ ಹಾವಳಿಯು ದಿನ ಕಳೆದಂತೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯು ಏರಿಕೆಯಾಗುತ್ತಿದೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ವೈದ್ಯ ಬಲಿಯಾಗಿದ್ದಾರೆ.
ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಿಲ್ಲರ್ ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಕಾಡುತ್ತಿದೆ. ದೆಹಲಿಯಲ್ಲಿ ಈಗಾಗಲೇ ಒಟ್ಟು 21 ವೈದ್ಯಕೀಯ ಸಿಬ್ಬಂದಿಗೆ ಸೋಂಕು ಹರಡಿದೆ. ಇಂದೋರ್ನಲ್ಲಿ ಒಬ್ಬ ವೈದ್ಯನಿಗೆ ಸೋಂಕು ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.