Home ರಾಜ್ಯ ಕೊಡೇರಿಯಲ್ಲಿ ನಾಡಾ ದೋಣಿ ದುರಂತ ; ನಾಲ್ವರು ಮೀನುಗಾರರು ನೀರುಪಾಲು

ಕೊಡೇರಿಯಲ್ಲಿ ನಾಡಾ ದೋಣಿ ದುರಂತ ; ನಾಲ್ವರು ಮೀನುಗಾರರು ನೀರುಪಾಲು

ಉಡುಪಿ : ಕರಾವಳಿಯಲ್ಲಿ ಮಳೆ ಆರ್ಭಟ ಮತ್ತೆ ಆರಂಭವಾಗಿದ್ದು, ಬೈಂದೂರು ಕಿರಿಮಂಜೇಶ್ವರ ಕೊಡೇರಿ ಕಡಲ ಕಿನಾರೆಯಲ್ಲಿ ನಾಡ ದೋಣಿ ದುರಂತ ಸಂಭವಿಸಿದೆ. ಮಧ್ಯಾಹ್ನ ವೇಳೆ ಸಾಗರಶ್ರೀ ಹೆಸರಿನ ನಾಡಾ ದೋಣಿ ದಡಕ್ಕೆ ಬರುವ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಛಿದ್ರವಾಗಿದೆ. ಘಟನೆಯಲ್ಲಿ ದೋಣಿಯಲ್ಲಿದ್ದ 12 ಮಂದಿ ಮೀನುಗಾರರಲ್ಲಿ, 8 ಜನ ಮೀನುಗಾರರು ಈಜಿ ದಡ ಸೇರಿದ್ದು ನಾಲ್ವರು ಮೃತಪಟ್ಟಿದ್ದಾರೆ.

ನಾಗ ( 46), ಶೇಖರ ( 35), ಲಕ್ಷ್ಮಣ ( 34) ಮತ್ತು ಮಂಜುನಾಥ ( 38) ಮೃತಪಟ್ಟಿದ್ದಾರೆ.  ಶವಗಳು ಬಲೆಗೆ ಸಿಲುಕಿರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜೇಸಿಬಿ ಬಳಸಿ ಬಲೆ ಎಳೆಯುವ ಪ್ರಯತ್ನ ನಡೆಯುತ್ತಿದೆ.

ಸದ್ಯ ಘಟನಾಸ್ಥಳಕ್ಕೆ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಎಎಸ್ ಪಿ ಹರಿರಾಂ ಶಂಕರ್, ಡಿಸಿ ಜಿ.ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಳಿದ ಮೀನುಗಾರರ ಮೃತ ದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments