ಕೊಪ್ಪಳ : ಗಂಗಾವತಿ ವಿಧಾನಸಭೆ ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೇಟ್ ನೀಡಬೇಡಿ ಎಂದು ಇಲ್ಲಿನ ಕಾಂಗ್ರೆಸ್ ಮುಖಂಡರು ವರಿಷ್ಠರ ಮುಂದೆ ಮನವಿ ಮಾಡಿದ್ದು, ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿರೋ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಬಿಗ್ ಶಾಕ್ ಆಗಿದೆ.
ಆಂಜನೇಯನ ಜನ್ಮ ಸ್ಥಳದಲ್ಲಿ ಹಿಂದುಗಳಿಗೆ ಟಿಕೆಟ್ ನೀಡದಿದ್ದರೆ ಸೋಲು ಖಚಿತ ಎಂಬುದು ಕಾಂಗ್ರೆಸ್ ಮುಖಂಡರ ವಾದವಾಗಿದೆ. ಈ ವಿಚಾರವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮುಂದೆ ಪ್ರಸ್ತಾಪ ಮಾಡಿದ್ದು, ಇಕ್ಬಾಲ್ ಅನ್ಸಾರಿಗೆ ಇದು ಶಾಪವಾಗಿ ಪರಿಣಮಿಸಲಿದೆ. ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮುಖಂಡರು ಮನವಿ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಇಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟರೆ ಗೆಲ್ಲುವ ಪರಿಸ್ಥಿತಿ ಇಲ್ಲ ಎಂದು ಬಿ.ಕೆ.ಹರಿಪ್ರಸಾದ್ಗೆ ಕಾಂಗ್ರೆಸ್ ಮುಖಂಡರು ಮನವರಿಕೆ ಮಾಡಿಕೊಟ್ಟಿದ್ದಾರೆ.