ನವದೆಹಲಿ : ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತಿರೋ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಪುಣೆ, ಚೆನ್ನೈ, ನಾಗ್ಪುರ ಹಾಗೂ ಅಹಮದಾಬಾದ್ ನಗರಗಳಿಂದ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬರೋ ವಿಮಾನಗಳ ತಾತ್ಕಾಲಿಕ ನಿಷೇಧವನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಕೊಲ್ಕತ್ತಾ ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಅಕೌಂಟ್ನಲ್ಲಿ ಟ್ವೀಟ್ ಮಾಡಲಾಗಿದೆ. ಈ ಮೊದಲು ಪಶ್ಚಿಮ ಬಂಗಾಳ ಸರ್ಕಾರ ಜುಲೈ 4ರಂದು ವಿಮಾನಯಾನ ಹಾರಾಟ ನಿಷೇಧದ ಬಗ್ಗೆ ಪ್ರಕಟಣೆ ಹೊರಡಿಸಿತ್ತು. ಅದರ ಅನ್ವಯ ಜುಲೈ 6 ರಿಂದ 19ರವರೆಗೆ ವಿಮಾನಯಾನ ಹಾರಾಟ ನಿಷೇಧಿಸಲಾಗಿತ್ತು. ಇದೀಗ ನಿಷೇಧವನ್ನು ವಿಸ್ತರಿಸಲಾಗಿದೆ.
ದೆಹಲಿ, ಮುಂಬೈ, ಪುಣೆ, ಚೆನ್ನೈ, ನಾಗ್ಪುರ ಹಾಗೂ ಅಹಮದಾಬಾದ್ ನಗರಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರೋದ್ರಿಂದ ಕೊಲ್ಕಾತ್ತಾದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.