ಬೆಂಗಳೂರು : ಕರ್ನಾಟಕದ ಮಾಜಿ ರಾಜ್ಯಪಾಲ ತ್ರಿಲೋಕ ನಾಥ ಚತುರ್ವೇದಿ (90) ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನೋಯ್ಡಾದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ಕೊನೆಯುಸಿರೆಳೆದ್ದಿದ್ದಾರೆ.
1984ರಿಂದ 1989ರವರೆಗೆ ಭಾರತದ ಮಹಾಲೇಖಪಾಲರಾಗಿ ಕಾರ್ಯನಿರ್ವಹಿಸಿದ್ದರು. 1990ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಚತುರ್ವೇದಿ , ಆಗಸ್ಟ್ 2002ರಿಂದ ಆಗಸ್ಟ್ 2007 ರವರೆಗೆ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.