Home ರಾಜ್ಯ ಸಿದ್ದರಾಮಯ್ಯಗೆ ಕೊರೋನಾ ಪಾಸಿಟಿವ್

ಸಿದ್ದರಾಮಯ್ಯಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಕಳೆದ ಎರಡು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ತಡರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕೊವಿಡ್ ಪರೀಕ್ಷೆ ನಡೆಸಲಾಗಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ .
ಈ ಬಗ್ಗೆ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ, ” ನಿನ್ನೆ ಬೆಳಗ್ಗೆಯಿಂದ ತಂದೆಯವರಿಗೆ ಜ್ವರಬಂದಿದ್ದು, ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು . ಕೊರೋನಾ ಆ್ಯಂಟಿಜನ್ ಟೆಸ್ಟ್ ಮಾಡಲಾಗಿ, ಅವರಿಗೆ ಕೊರೋನಾ ಸೋಂಕು ತಗುಲಿರುವುದ ದೃಢಪಟ್ಟಿದೆ. ಇತ್ತೀಚಿಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರೆಂಟೀನ್ ಆಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ಕೊರೋನಾ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments