ಗದಗ : ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರುವು ವಿರೋಧಿಸಿ ಗದಗದಲ್ಲಿ ಇಂದು ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ಮಾಡಲಾಯ್ತು. ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಮೆ ತೆರುವುಗೊಳಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪುನಃ ರಾಯಣ್ಣ ನ ಪ್ರತಿಮೆ ಸ್ಥಾಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರಿಗೆ ಮನವಿ ಸಲ್ಲಿಸಿದರು. ಜಯಕರ್ನಾಟಕ ಸಂಘದ ಅಧ್ಯಕ್ಷ ಚಂದ್ರು ಚವ್ಹಾಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.