Home ರಾಜ್ಯ ಪಿಡಿಒ, ಅಕೌಂಟೆಂಟ್ ಎಸಿಬಿ ಬಲೆಗೆ..!

ಪಿಡಿಒ, ಅಕೌಂಟೆಂಟ್ ಎಸಿಬಿ ಬಲೆಗೆ..!

ಗದಗ : ಎನ್.ಎ ಪ್ಲಾಟ್ ಮಾಡಿಸಿದ್ದ ಜಮೀನಿನ ಉತಾರ ( ಪಾಣಿ) ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಪಿಡಿಓ, ಅಕೌಂಟೆಂಟ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. 

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಮುರಡಿ ಗ್ರಾಮ ಪಂಚಾಯತಿ ಪಿಡಿಒ ಸಿದ್ದಪ್ಪ ಡಂಬಳ ಮತ್ತು ಅಕೌಂಟೆಂಟ್ ಪ್ರದೀಪ್ ಕದಮ ಎಸಿಬಿ ಬಲೆಗೆ ಬಿದ್ದವರು.

ಮುಂಡರಗಿ ತಾಲ್ಲೂಕಿನ ಹಿರೇವಡ್ಡಟ್ಟಿ ಗ್ರಾಮದ ನಾಗರಾಜ್ ಹೊಸಮನಿ ಎಂಬುವರು ತಮ್ಮ ಜಮೀನಿನಲ್ಲಿ ಎನ್.ಎ ಮಾಡಿಸಿ ಪ್ಲಾಟ್ ಮಾರಾಟ ಮಾಡಲು ಮುಂದಾಗಿದ್ದರು. ಹೀಗಾಗಿ ಎನ್.ಎ ಮಾಡಿಸಿದ್ದ ಜಮೀನಿನ ಉತಾರ ಕೊಡಲು ಲಂಚದ ಬೇಡಿಕೆ ಇಟ್ಟಿದ್ದರು. 2 ಎಕರೆ ಜಮೀನಿನಲ್ಲಿ ಮುರುಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 41 ಪ್ಲಾಟ್ ಮಾಡಿಸಿ ಮಾರಾಟಕ್ಕೆ ಮುಂದಾಗಿದ್ದರು. ಹೀಗಾಗಿ ತಲಾ ಒಂದು ಪ್ಲಾಟ್ ಗೆ 1000. ರೂ ದಂತೆ ಒಟ್ಟು 41 ಪ್ಲಾಟಗಳಿಗೆ ಸುಮಾರು 41 ಸಾವಿರ ಬೇಡಿಕೆ ಇಟ್ಟಿದ್ದರು. ಇಂದು ಮುಂಡರಗಿ ಪಟ್ಟಣದ ಅಕೌಂಟೆಂಟ್ ಮನೆಯಲ್ಲಿ ಲಂಚ ಪಡೆಯುತ್ತಿರುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಪಿಡಿಒ, ಅಕೌಂಟೆಂಟ್ ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments