ಗದಗ : ಬೆಳಗಾವಿಯ ಪಿರನವಾಡಿ ಗ್ರಾಮದಲ್ಲಿ ದೇಶ ಭಕ್ತ, ಬ್ರಿಟೀಷರಿಗೆ ಸಿಂಹಸ್ವಪ್ನವಾಗಿ ಎದೆಕೊಟ್ಟು ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧಿಡೀರನೆ ತೆರವುಗೊಳಿಸಿದ ಅಲ್ಲಿನ ಅಧಿಕಾರಿಗಳ ನಡೆಯನ್ನು ಖಂಡಿಸಿ ಇಂದು ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಸಾಂಕೇತಿಕ ಪ್ರತಿಭಟನೆ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ, ಅಭಿಮಾನಿ ಬಳಗ , ಕನ್ನಡ ಪರ ಸೇರಿದಂತೆ ಹಲವು ಸಂಘಟನೆಗಳ ಸಮ್ಮುಖದಲ್ಲಿ ಮನವಿ ಸಲ್ಲಿಸಲಾಯಿತು. ಶೀಘ್ರವೇ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನ ಪ್ರತಿಷ್ಠಾಪಿಸಬೇಕು ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಅಡ್ಡಿಪಡಿಸಿದ ಅಧಿಕಾರಿಗಳನ್ನ ತಕ್ಷಣ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮಹಾಲಿಂಗೇಶ್ ಹಿರೇಮಠ.