Home ರಾಜ್ಯ ‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ.

ಇನ್ನೂ ಮುಂದೆ ರಾಜ್ಯದಲ್ಲಿ ಗೋಹತ್ಯೆ ಮಾಡುವುದು ಕಾನೂನು ಬಾಹಿರ ಅಪರಾಧವಾಗಿದೆ‌. ಅದರ ಅನ್ವಯ ಗೋ ವಧೆ ಮಾಡುವ, ಗೋವುಗಳ ಸಾಗಾಣಿಕೆ ಸೇರಿದಂತೆ ಇನ್ನಿತರೆ ಅಪರಾಧಗಳಲ್ಲಿ ಭಾಗಿಯಾದವರಿಗೆ ಶಿಕ್ಷೆ ವಿಧಿಸುವ ಕಾನೂನು ರೂಪಿಸಲಾಗಿದೆ.  ಕಳೆದ ಬಾರಿ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಅಂಗೀಕಾರ ಪಡೆದಿತ್ತು. ವಿಧಾನಪರಿಷತ್ತಿನಲ್ಲಿ ಜೆಡಿಎಸ್-ಕಾಂಗ್ರೆಸ್ ವಿರೋಧದ ಹಿನ್ನೆಲೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ. ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ಸರಕಾರ ಮುಂದಾಗಿತ್ತು. ಇದೀಗ ಕಾಯ್ದೆಗೆ ರಾಜ್ಯಪಾಲು ಅಂಕಿತ ಹಾಕಿದ್ದು, ಸೋಮವಾರದಿಂದ ಅಂದರೆ ನಾಳೆಯಿಂದಲೇ ಅನ್ವಯವಾಗುವಂತೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಅನುಷ್ಠಾನಗೊಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

‘ಮನೆ ಮಾಲೀಕನನ್ನು ರಕ್ಷಿಸಿ ಸಾವಿಗೆ ಶರಣಾದ ಶ್ವಾನ’

ವಿಜಯಪುರ: ಶ್ವಾನ ಮನುಷ್ಯನ ಅತಿ ನಿಯತ್ತಿನ ಪ್ರಾಣಿ, ತನ್ನನು ಸಾಕಿದ ಯಜಮಾನನ ಮಾನ ಪ್ರಾಣ ಉಳಿಸಲು ಜೀವವನ್ನೇ ಪಣಕ್ಕಿಟ್ಟಿರುವ ಸಾವಿರಾರು ಪ್ರಕರಣ ದೇಶದಲ್ಲಿ‌ನಡೆದು ಹೋಗಿವೆ. ಅಂತದೇ ಒಂದು ಪ್ರಕರಣ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ...

‘ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಬರಬಹುದು’ : ಶಶಿಕಲಾ ಜೊಲ್ಲೆ

ಬೆಂಗಳೂರು : ಅಂಗ ವೈಕಲ್ಯತೆ ಶಾಪವಲ್ಲ,ಹುಟ್ಟಿನಿಂದ ಅಥವಾ ಅಪಘಾತದಿಂದಲೂ ಬರಬಹುದು.ಬಂದ ಮೇಲೆ ಕುಗ್ಗದೆ ಧೈರ್ಯವಾಗಿ ಎದುರಿಸಿ ಸಾಧನೆಯ ಮೆಟ್ಟಿಲನ್ನು ಏರಬೇಕಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಚಿವೆ ಶಶಿಕಲಾ ಜೊಲ್ಲೆ ಎಂದು ಹೇಳಿದರು. ಬೆಂಗಳೂರು...

ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ !

ವಿಜಯನಗರ (ಹೊಸಪೇಟೆ) : ಕೋರ್ಟ್ ಆವರಣದಲ್ಲೇ ವಕೀಲನೋರ್ವನ ಬರ್ಬರ ಹತ್ಯೆಯಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ಘಟನೆ ನಡೆದಿದೆ. ಡಾ. ತಾರಿಹಳ್ಳಿ ವೆಂಕಟೇಶ್ ಎನ್ನುವವರನ್ನ ಮನೋಜ್ ಎಂಬ ಯುವಕ (22) ಮಚ್ಚಿನಿಂದ...

ಬಾಲಕನ ಮೇಲೆ ಪೈಶಾಚಿಕ ಕೃತ್ಯ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಕಗ್ಗೊಲೆ

ಕಲಬುರಗಿ/ಜೇವರ್ಗಿ : ಅನ್ಯ ಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ 14 ವರ್ಷದ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದ ಮಹೇಶ್ ಎಂಬ...

Recent Comments