ಗೋವಾ ಸಿಎಂ‌ ಮನೋಹರ್ ಪರಿಕ್ಕರ್ ವಿಧಿವಶ

0
122

ಗೋವಾ ಮುಖ್ಯಮಂತ್ರಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ( 63) ವಿಧಿವಶರಾಗಿದ್ದಾರೆ.
ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪರಿಕ್ಕರ್ ಅವರು ಗೋವಾ, ಮುಂಬೈ , ದಿಲ್ಲಿಯಲ್ಲಿ ಚಿಕಿತ್ಸೆ ಪಡೆದಿದ್ದರು.‌ಅಷ್ಟೇ ಅಲ್ಲದೆ ಕಳೆದ ವರ್ಷ 3 ತಿಂಗಳುಗಳ ಕಾಲ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದಿದ್ದರು.‌ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸು ಗೋವಾಕ್ಕೆ ಆಗಮಿಸಿ ಸರ್ಕಾರ ನಡೆಸಿದ್ದರು. ಅಷ್ಟೇ ಅಲ್ಲದೇ ಮೂಗಿಗೆ ಪೈಪ್ ಹಾಕಿದ್ದ ಸ್ಥಿತಿಯಲ್ಲೇ ಬಜೆಟ್ ಕೂಡ ಮಂಡನೆ ಮಾಡಿದ್ದರು.

ದೆಹಲಿಯಿಂದ ವಾಪಸ್ಸಾದ ಮೇಲೆ ತಮ್ಮ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗುಡಾಯಿಸಿದ್ದರಿಂದ ಪಣಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಪರಿಕ್ಕರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here