Sunday, June 26, 2022
Powertv Logo
Homeಕ್ರೀಡೆಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ

ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ

ಕೊರೊನಾವೈರಸ್ ಕಾರಣದಿಂದಾಗಿ ಭಾರತದಲ್ಲಿ ಕ್ರಿಕೆಟ್ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಇದೀಗ ಭಾರತ ಮತ್ತೆ ಕ್ರಿಕೆಟ್ ಸರಣಿಯ ಆರಂಭಕ್ಕೆ ಸಜ್ಜಾಗುತ್ತಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಮತ್ತೆ ಚಾಲನೆ ದೊರೆಯಲಿದೆ. ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿದೆ. ಟೆಸ್ಟ್ ಸರಣಿಯ ಎರಡನೇ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಪಂದ್ಯಕ್ಕೆ ಸ್ಟೇಡಿಯಂಗೆ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ಮುಂಬೈ ಕ್ರಿಕೆಟ್ ಅಸೋಸಿಯೇಶನ್​ಗೆ ಅನುಮತಿಯನ್ನು ನೀಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇದು ಸಂತಸದ ವಿಷಯವಾಗಿದೆ.

2 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments