Home P.Special ವಿಜ್ಞಾನ-ತಂತ್ರಜ್ಞಾನ ಜಿಯೋದಲ್ಲಿ ಗೂಗಲ್ ದೊಡ್ಡಮಟ್ಟದ ಹೂಡಿಕೆ – ಬರಲಿದೆ 5 ಜಿ ಸ್ಮಾರ್ಟ್ ಫೋನ್ ..!

ಜಿಯೋದಲ್ಲಿ ಗೂಗಲ್ ದೊಡ್ಡಮಟ್ಟದ ಹೂಡಿಕೆ – ಬರಲಿದೆ 5 ಜಿ ಸ್ಮಾರ್ಟ್ ಫೋನ್ ..!

ಫೇಸ್ ಬುಕ್ ಬಳಿಕ ಇದೀಗ ಜಿಯೋ ಸಂಸ್ಥೆಯಲ್ಲಿ ಗೂಗಲ್ 33,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, ರಿಲಾಯನ್ಸ್ ಇಂಡಸ್ಟ್ರೀಸ್ ಟೆಕ್ನಾಲಜಿಯಲ್ಲಿ ಶೇ.77ರಷ್ಟು ಪಾಲುದಾರಿಕೆ ಪಡೆಯಲಿದೆ ಅಂತ ರಿಲಾಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ತಿಳಿಸಿದ್ದಾರೆ.

ಇಂದು ನಡೆದ ರಿಲಾಯನ್ಸ್ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗೂಗಲ್ ತಮ್ಮ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದೆ. ಅಲ್ಲದೆ 2021ರ ವೇಳೆಗೆ ಗೂಗಲ್ ಸಹಯೋಗದಲ್ಲಿ 5 ಜಿ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲು ಉದ್ದೇಶಿಸಿದ್ದೇವೆ ಎಂದು ಘೋಷಿಸಿದರು.

ರಿಲಾಯನ್ಸ್ ಶೂನ್ಯ ಸಾಲ ಹೊಂದಿರೋ ಸಂಸ್ಥೆಯಾಗಿದ್ದು, ಜಿಯೋ ಪ್ಲಾಟ್ ಫಾರ್ಮ್ ನಲ್ಲಿ ಹೂಡಿಕೆ ಮಾಡಲು ಮುಂದಾಗಿರುವ ಗೂಗಲನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದೇವೆ. ಗೂಗಲ್ ಮತ್ತು ಜಿಯೋ  ಒಟ್ಟಾಗಿ 2021ರ ವೇಳೆಗೆ ಕಡಿಮೆ ಬೆಲೆಗೆ 5 ಜಿ ಸ್ಮಾರ್ಟ್ ಫೋನ್ ಗಳನ್ನು ತಯಾರಿಸಲಿವೆ  ಎಂದು ಅಂಬಾನಿ ಹೇಳಿದ್ದಾರೆ.

ಇನ್ನು ಗೂಗಲ್ ಸಿಇಒ ಸುಂದರ್ ಪಿಚ್ಚೈ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜಿಯೋ ಜೊತೆ ಪಾಲುದಾರಿಕೆಗೆ ಮುಂದಾಗಿರೋದಕ್ಕೆ ಹೆಮ್ಮೆ ಇದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಹುಣಸೋಡು ಬ್ಲ್ಯಾಸ್ಟ್ ಪ್ರಕರಣ-ಮೃತಪಟ್ಟ ಐದು ಮಂದಿಯ ಗುರುತು ಪತ್ತೆ

ಶಿವಮೊಗ್ಗ: ಹುಣಸೋಡಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ  6  ಜನರು ಮೃತರಾಗಿರುವುದು ತಿಳಿದು ಬಂದಿದ್ದು, 5  ಜನರ ಮೃತ ದೇಹಗಳನ್ನು ಅವರ ಸಂಬಂಧಿಕರು ಗುರುತಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗದ ಪವನ್ ಕುಮಾರ್ (29) ಜಾವೀದ್...

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

Recent Comments