ಬೆಂಗಳೂರು: ಯಾವುದೇ ಕಾರಣಕ್ಕೂ ಸಾರಿಗೆ ನೌಕರರ ಜೊತೆ ಸಂಧಾನ ಇಲ್ಲವೇ ಇಲ್ಲ. ಸಾರಿಗೆ ಇಲಾಖೆಗೆ ಪ್ರತಿದಿನ 4 ಕೋಟಿ ಲಾಸ್ ಆಗುತ್ತಿದೆ. ನೌಕರರ ಬೆದರಿಕೆಗೆ ಸರ್ಕಾರ ಬೆದರುವುದಿಲ್ಲ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡುವಂತಿಲ್ಲ. ಹಾಳು ಮಾಡಿದ್ದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಎಸ್ಮಾ ಕಾಯ್ದೆ ಜಾರಿ ಮಾಡಲಾಗುವುದು ಎಂದು ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಸಾರಿಗೆ ನೌಕರರಿಗೆ ಖಡಕ್ ಎಚ್ಚರಕೆಯನ್ನು ನೀಡಿದ್ದಾರೆ.
ಇಡೀ ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಸೇರಿದಂತೆ ಎಲ್ಲಾ ಉಚಿತವಾಗಿ ಬಿಡುತ್ತೇವೆ. ರಜೆ. ಹಬ್ಬ ಇರುವುದರಿಂದ ವಿಶೇಷ ರೈಲು ಬಿಡೋಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.