Monday, August 15, 2022
Powertv Logo
Homeರಾಜ್ಯಕೊವಿಡ್ ನಿಯಮದ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ: ಬಸವರಾಜ್ ಬೊಮ್ಮಾಯಿ

ಕೊವಿಡ್ ನಿಯಮದ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ: ಬಸವರಾಜ್ ಬೊಮ್ಮಾಯಿ

ಬಸವಕಲ್ಯಾಣ: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿ ಹಬ್ಬುತ್ತಿದ್ದು, ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಆದ್ದರಿಂದ ಕೊವಿಡ್ ನಿಯಮಾವಳಿಗಳಲ್ಲಿ ಬದಲಾವಣೆ ಇಲ್ಲ. ಆರೋಗ್ಯದ ಹಿತ ದೃಷ್ಠಿಯಿಂದ ಕೆಲ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಬಸವಕಲ್ಯಾಣದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಿನಿಮಾಗಳಿಗೆ ಶೇ.50 ರಷ್ಟು ಭರ್ತಿಗೆ ಮಾತ್ರ ಅವಕಾಶ ಇದೆ. ಈಗಾಗಲೇ ಕೆಲ ಚಿತ್ರಗಳು ಬಿಡುಗಡೆಯಾಗಿದ್ದು, ಇನ್ನೂ ಕೆಲವು ಚಿತ್ರಗಳು ರಿಲೀಸ್ ಆಗಬೇಕಿದೆ. ಸ್ವಲ್ಪ ಚಿತ್ರಗಳಿಗೆ ಲಾಸ್ ಆಗಿರೋದನ್ನ ನೋಡಿದ್ದೇವೆ. ಈ ವಿಷಯದ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ಶೀಘ್ರವೇ ಸಿಎಂ ಹಾಗೂ ಆರೋಗ್ಯ ಸಚಿವರ ಜೊತೆಗೆ ಚರ್ಚಿಸಿ ಏನಾದರೂ ಪರಿಹಾರ ನೀಡುತ್ತೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

6 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments