Home ರಾಜ್ಯ ಶಾಲೆ ತೆರೆಯಲು ಸರ್ಕಾರದ ಸಕಲ ಸಿದ್ಧತೆ

ಶಾಲೆ ತೆರೆಯಲು ಸರ್ಕಾರದ ಸಕಲ ಸಿದ್ಧತೆ

ಬೆಂಗಳೂರು: ಕೋವಿಡ್ 19 ಕಾರಣದಿಂದ ಶಾಲೆಗಳು ಯಾವಾಗ ಆರಂಭ ಆಗುತ್ತವೆ ಎಂದು ಪೋಷಕರು ಯೋಚಿಸುತ್ತದ್ದಾರೆ. ಈ ನಡುವೆ ಶಾಲೆ ಆರಂಭದಲ್ಲಿ ಬಗ್ಗೆ ಸರಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಮಕ್ಕಳ ಶೈಕ್ಷಣಿಕ ಹಿತ ದೃಷ್ಠಿಯಿಂದ ಮಕ್ಕಳನ್ನು ಮುಂದಿನ ತರಗತಿಗೆ ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದೆ. ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಿ ಎಂದು ಶಿಕ್ಷಣ ಸಚಿವರು ಮನವಿ ಮಾಡಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಫೀಸ್ ಕಡಿತಗೊಳಿಸಬೇಕು. ಮಕ್ಕಳು ಶಾಲೆಯಿಂದ ಬಹುಕಾಲ ಹೊರಗಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನೂ ಮೊದಲ ಹಂತದಲ್ಲಿ 10 ಮತ್ತು 12ನೇ ತರಗತಿಯನ್ನು ಪ್ರಾರಂಭಿಸುವ ಯೋಚನೆಲ್ಲಿದೆ. ಇದ್ದಕ್ಕಾಗಿ ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ ದಿನಾಂಕ ನಿಗಧಿ ಮಾಡಲಾಗುವುದು ಎಂದು ಹೇಳಿದ್ದಾರೆ. ನಂತರ 1 ರಿಂದ 9ನೇ ತರಗತಿಯನ್ನು ಪ್ರಾರಂಭಿಸಲು ಸಕಲ ತಯಾರಿಯನ್ನು ಮಾಡಿಕೊಳ್ಳುತ್ತಿದ್ದು, ಇದಕ್ಕಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದುಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments