ಬೆಂಗಳೂರು: ಲಾಕ್ಡೌನ್ ಸಡಿಲಿಕೆಯ ಬಗ್ಗೆ ಮಾಹಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಲಾಕ್ಡೌನ್ ಸಡಿಲಿಕೆ ನಿರ್ಧಾರವನ್ನು ವಾಪಾಸ್ ಪಡೆದುಕೊಂಡಿದೆ. ಈ ಮೂಲಕ ಲಾಕ್ಡೌನ್ ಸಡಿಲಿಕೆಯ ಖುಷಿಯಲ್ಲಿದ್ದವರಿಗೆ ಸರ್ಕಾರ ಶಾಕ್ ನೀಡಿದೆ.
ಏಪ್ರಿಲ್ 20 ರ ಬಳಿಕ ಗ್ರೀನ್ ಝೋನ್ನಲ್ಲಿ ಬರುವ ಪ್ರದೇಶಗಳಲ್ಲಿ ಲಾಕ್ಡೌನ್ ಸಡಿಲಿಕೆಯನ್ನು ಮಾಡಿ, ದ್ವಿಚಕ್ರ ವಾಹನಗಳಿಗೆ ಸಂಚರಿಸಲು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಇದೀಗ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಏಪ್ರಿಲ್ 20 ರ ಬಳಿಕವೂ ಲಾಕ್ಡೌನ್ ಯಥಾಸ್ಥಿತಿಯಲ್ಲಿರಲಿದೆ. ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಇರಲಿದ್ದು, ಐಟಿಬಿಟಿ ಕ್ಷೇತ್ರದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಕೊಟ್ಟು, ಉಳಿದಂತೆ ಮನೆಯಿಂದಲೇ ಕೆಲಸದ ನೀತಿಯನ್ನು ಮುಂದುವರೆಸಲಾಗುವುದು ಎಂದು ಆದೇಶ ನೀಡಿದೆ.