Home ರಾಜ್ಯ ಜಿಲ್ಲಾ ಉಸ್ತವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಕಿಮ್ಸ್​ಗೆ ಭೇಟಿ

ಜಿಲ್ಲಾ ಉಸ್ತವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಕಿಮ್ಸ್​ಗೆ ಭೇಟಿ

ಹುಬ್ಬಳ್ಳಿ : ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತಾ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನೆಡಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊವಿಡ್-19 ರೋಗಿಗಳು ಹಾಗೂ ಕಿಮ್ಸ್ ಲ್ಯಾಬ್ ನಲ್ಲಿ ನಡೆಸುತ್ತಿರುವ ಆರ್.ಟಿ.ಪಿ.ಸಿ.ಆರ್ (RT-PCR)ಟೆಸ್ಟ್ ಗಳ ಬಗ್ಗೆ ಮಾಹಿತಿ ಪಡೆದರು.

ಕಿಮ್ಸ್ ಆಸ್ಪತ್ರೆಯಲ್ಲಿ 630 ಬೆಡ್ ಗಳಿಗೆ ಆಕ್ಸಿಜನ್ ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿದೆ. 100 ವೆಂಟಿಲೇಟರ್ ಸೌಲಭ್ಯದ ಐ.ಸಿ.ಯು ವಾರ್ಡ್ ಸಿದ್ದಪಡಿಸಲಾಗಿದೆ. ಕೊಪ್ಪಳ,‌ಹಾವೇರಿ, ಸವದತ್ತಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಂದ ಕೊವೀಡ್ ರೋಗಿಗಳು ಹುಬ್ಬಳ್ಳಿಯ ಕಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇಂತಹವರ ಮಾಹಿತಿಯನ್ನು ಆಯಾ ಜಿಲ್ಲಾ ಕಚೇರಿಗಳಿಗೆ ಕಳುಹಿಸಿ ಕೊಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊವಿಡ್ ರೋಗಿಗಳ ಮರಣ ಪ್ರಮಾಣ ಶೇ.5 ರಷ್ಟಿದೆ. ಪ್ರತಿದಿನ 2 ಸಾವಿರಕ್ಕೂ ಅಧಿಕ ರ್ಯಾಟ್ (RAT) ಟೆಸ್ಟ್ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೊವೀಡ್ ಪ್ರಕರಣಗಳನ್ನು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತರೆ ವಿಭಾಗಳ ವೈದ್ಯರು ಹಾಗೂ‌ ನರ್ಸ್ ಗಳಿಗೆ ಕೋವಿಡ್ ಚಿಕಿತ್ಸೆ ನೀಡುವುದರ ಕುರಿತು ತರಬೇತಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದರು.

333‌ ಕೋವಿಡ್ -19 ರೋಗಿಗಳು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 115 ರೋಗಿಗಳು ಸಾರಿ(SARI) ಲಕ್ಷಣಗಳನ್ನು ಹೊಂದಿದ್ದಾರೆ. ಒಟ್ಟು 185 ರೋಗಿಗಳನ್ನು ಐ.ಸಿ.ಯು ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಹೇಳಿದರು.

ಕೇಂದ್ರೀಕೃತ ಆಮ್ಲಜನಕ ಸರಬರಾಜ ಘಟಕ ವೀಕ್ಷಣೆ : ಕಿಮ್ಸ್ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಕೇಂದ್ರೀಕೃತ ಆಮ್ಲಜನಕ ಸರಬರಾಜ ಘಟಕ ವೀಕ್ಷಿಸಿದ ಜಿಲ್ಲಾ ಉಸ್ತಾವರಿ ಕಾರ್ಯದರ್ಶಿ ಘಟಕದ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದುಕೊಂಡರು.

20 ಕೆ.ಎಲ್. ಸಾಮರ್ಥ್ಯ ವೈದ್ಯಕೀಯ ದ್ರವ ಆಮ್ಲಜನಕ : ಘಟಕ ಇದಾಗಿದೆ. ದ್ರವ ರೂಪದ ಆಮ್ಲಜನಕವನ್ನು ಅನಿಲ ರೂಪಕ್ಕೆ‌ ಬದಲಾಯಿಸಿ ಸಬರಾಜು ಮಾಡಲು‌ 400 ಎನ್.ಎಮ್.ಕ್ಯೂ. ಸಾಮರ್ಥ್ಯದ ಆವಿ ಪರಿವರ್ತಕವನ್ನು ಅವಳವಡಿಸಲಾಗಿದೆ. ತುರ್ತು ಸಂದರ್ಭದ ಬಳಕೆಗೆ ಆಮ್ಲಜನದ ಸಿಲೆಂಡರ್ ಗಳನ್ನು ಸಿದ್ದವಿರಿಸಲಾಗಿದೆ ಎಂದು ಪರಿಸರ ಅಭಿಯಂತರ ಅಖಿಲ್ ಕುಮಾರ್ ವಿವರಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪ ವಿಭಾಗಾಧಿಕಾರಿ ಮಹಮದ್ ಜುಬೇರ್, ಕಿಮ್ಸ್ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ತಹಶೀಲ್ದಾರ್ ಶಶಿಧರ ಮಾಡ್ಯಾಳ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments