Home ರಾಜ್ಯ  ವರ ಎಸ್ಕೇಪ್ ಆದ್ರೂ ನಡೀತು ಮದುವೆ..!

 ವರ ಎಸ್ಕೇಪ್ ಆದ್ರೂ ನಡೀತು ಮದುವೆ..!

ಚಿಕ್ಕಮಗಳೂರು: ರಾತ್ರಿ ರಿಸೆಪ್ಷನ್‍ಗೆ ಇದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿ, ಮಧುಮಗಳಾಗಿ ನಿಂತಿದ್ದ ಯುವತಿಯನ್ನು ಬೆಂಗಳೂರಿನ ಬಿಎಂಟಿಸಿ ಬಸ್ ಕಂಡಕ್ಟರ್ ಕೈ ಹಿಡಿದ ಅಪರೂಪದ ಮದುವೆಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಾಕ್ಷಿಯಾಗಿದೆ.

ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಅಶೋಕ್ ಹಾಗೂ ನವೀನ್ ಎಂಬ ಅಣ್ಣತಮ್ಮಂದಿರಿಗೆ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯಿಂದ ಹೆಣ್ಣು ತಂದಿದ್ದರು. ಅಶೋಕ್ ಮದುವೆ ದಾವಣಗೆರೆ ಮೂಲದ ಯುವತಿಯೊಂದಿಗೆ ಮುಗಿದಿದೆ. ಆದರೆ, ನವೀನ್ ಮದುವೆಯಾಗಬೇಕಿದ್ದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸರಪನಹಳ್ಳಿಯ ಯುವತಿ ಸಿಂಧುವನ್ನು ಛತ್ರದಲ್ಲೇ ನೋಡಿ ಬೆಂಗಳೂರಿನ ಬಿ.ಎಂ.ಟಿ.ಸಿ. ಕಂಡಕ್ಟರ್ ಚಂದ್ರು ಎಂಬುವರು ಮದುವೆಯಾಗಿದ್ದಾರೆ.

ಯಾಕಂದ್ರೆ, ನಿನ್ನೆ ರಾತ್ರಿ ಸಿಂಧು ಜೊತೆ ರಿಸೆಪ್ಷನ್‍ನಲ್ಲಿದ್ದ ನವೀನ್ ಇಂದು ಬೆಳಗ್ಗೆ ನಾಪತ್ತೆಯಾಗಿದ್ದ. ನವೀನ್ ಪ್ರೀತಿಸುತ್ತಿದ್ದ ಯುವತಿ ನನ್ನನ್ನ ಪ್ರೀತಿಸಿ ಬೇರೆ ಹುಡುಗಿಯನ್ನ ಮದುವೆಯಾಗಲು ಬಿಡಲ್ಲ. ನಾನು ಛತ್ರದಲ್ಲೇ ವಿಷ ಕುಡಿಯುತ್ತೇನೆ, ಮದುವೆ ನಿಲ್ಲಿಸುತ್ತೇನೆ ಎಂದು ಹೆದರಿಸಿದ್ದಕ್ಕೆ ವರ ನವೀನ್ ಛತ್ರದಿಂದಲೇ ನಾಪತ್ತೆಯಾಗಿ ಪ್ರೀತಿಸುತ್ತಿದ್ದ ಯುವತಿಗೆ ತುಮಕೂರಿಗೆ ಬರಲು ಹೇಳಿದ್ದ. ಆ ಹೊತ್ತಿಗೆ ಮದುವೆ ನಿಂತಿತ್ತು. ಆಗ ದೋರನಾಳು ಗ್ರಾಮದ ಪಕ್ಕದ ನಂದಿ ಗ್ರಾಮದ ಯುವಕ ಚಂದ್ರು ಮಧುಮಗಳಾಗಿ ನಿಂತಿದ್ದ ವಧು ಸಿಂಧು ಕೈಹಿಡಿದಿದ್ದಾನೆ. ಚಂದ್ರು ಬೆಂಗಳೂರಿನ ಬಿಎಂಟಿಸಿ ಬಸ್‍ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಾಪತ್ತೆಯಾದ ಯುವಕನನ್ನ ಪೋಷಕರು ಹುಡುಕಾಟ ನಡೆಸಿದರು ಸಿಕ್ಕಿಲ್ಲ. ಪ್ರೀತಿಸಿದ ಯುವತಿಗೆ ನವೀನ್ ತುಮಕೂರಿಗೆ ಬಾ ಎಂದಿದ್ದರಿಂದ ಅಲ್ಲಿಗೆ ಹೋಗಿ ನೋಡಿದರೂ ಆತ ಸಿಕ್ಕಿಲ್ಲ.  ಕೊನೆಗೆ ಹಸೆಮಣೆ ಏರಬೇಕಿದ್ದ ಯುವತಿಗೆ ಮದುವೆ ನಿಲ್ಲುವ ಆತಂಕ ಎದುರಾಗಿತ್ತು. ಆದರೆ, ಮದುವೆ ನಿಲ್ಲದೇ ಛತ್ರದಲ್ಲೇ ಮತ್ತೋರ್ವ ಯುವಕ ಚಂದ್ರು ನಾನೇ ಮದುವೆಯಾಗುತ್ತೇನೆಂದು ವಿವಾಹವಾಗಿದ್ದಾನೆ.

– ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

‘ಡಿ ಗ್ರೂಪ್‌ ನೌಕರ ಚಂದ್ರಶೇಖರ್‌ಗೆ ಮೊದಲ ಲಸಿಕೆ ವಿತರಣೆ’

ಬೆಂಗಳೂರು: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಟೆಂಡರ್ ನಾಗರತ್ನಾಗೆ ಲಸಿಕೆ ನೀಡಿ  ಹೂ ಗುಚ್ಛ ನೀಡಿ ಅಭಿನಂದಿಸಿದರು. ಜೊತೆ ಆರೋಗ್ಯ...

‘ಲಸಿಕೆ ವಿತರಣೆಗೆ ಚಾಲನೆ ಕೊಟ್ಟ ಪ್ರಧಾನಿ ಮೋದಿ’

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಕೊವಿಡ್ ಲಸಿಕೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು. ಅತಿ ಕಡಿಮೆ ದಿನದಲ್ಲಿ ಮಹಾಮಾರಿ ಕೊರೋನಾ ಗೆ ವಿಜ್ಞಾನಿಗಳು ಎರಡು ಲಸಿಕೆಯನ್ನು ಸಿದ್ಧ ಪಡಿಸಿದ್ದಾರೆ....

Recent Comments