ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು. ಮಂತ್ರಿಗಳು, ಶಾಸಕ, ಸಚಿವರು, ಹಿರಿಯ ಅಧಿಕಾರಿಗಳು ಕೊರೋನಾ ಲಸಿಕೆ ಪಡೆದು ಇವರೆಲ್ಲಾ ಮಾದರಿಯಾಗಲಿ ಎಂದು ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಟ್ವೀಟ್ ಮಾಡಿದ್ದಾರೆ.