Home ರಾಜ್ಯ ಪತ್ರಕರ್ತರ ಮೇಲಿನ‌ ಹಲ್ಲೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಪತ್ರಕರ್ತರ ಮೇಲಿನ‌ ಹಲ್ಲೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಹಾಸನ :  ಬೆಂಗಳೂರಿನ ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ವೇಳೆ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ  ಖಂಡಿಸಿ ಹಾಸನದಲ್ಲೂ ಪತ್ರಕರ್ತರು ಮೌನ ಪ್ರತಿಭಟನೆ‌ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ‌ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಟಿ.ವಿ.ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಎಸ್.ಆರ್.ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಸಂಘದ ಆವರಣದಿಂದ ಹೊರಟ ಮೆರವಣಿಗೆಯಲ್ಲಿ 50 ಕ್ಕೂ ಹೆಚ್ಚು ಪತ್ರಕರ್ತರು‌ ಭಾಗವಹಿಸಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರಿಗೆ ಮನವಿ ಸಲ್ಲಿಸಿದರು.

ಗಲಭೆಯಲ್ಲಿ ಹಲ್ಲೆ ಮಾತ್ರವಲ್ಲದೆ, ಕೆಲ ಪತ್ರಕರ್ತರ ವಾಹನಗಳನ್ನೂ ಜಖಂ ಮಾಡಿರುವುದು ವಿಷಾದನೀಯ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ರಾಜ್ಯ‌ಕಾರಿ ಸಮಿತಿ‌ ಸದಸ್ಯ ರವಿನಾಕಲಗೂಡು, ರಾಷ್ಟ್ರೀಯ ಮಂಡಳಿ‌ ಸದಸ್ಯ ಅತೀಖುರ್ ರೆಹಮಾನ್, ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹಿಂದೂ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಕೆ.ಜಿ.ಸುರೇಶ್, ನಗರ ಕಾರ್ಯದರ್ಶಿ ಸಿ.ಬಿ.ಸಂತೋಷ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಸಂಪಾದಕರು, ಮಾಜಿ‌‌ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments