ಹಾಸನ : ಹಾಸನ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ ಇಂದು ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ 47 ವರ್ಷದ ವ್ಯಕ್ತಿ ಹಾಗೂ ಅರಸೀಕೆರೆ ತಾಲ್ಲೂಕಿನ 88 ವರ್ಷದ ವೃದ್ದ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರಿಗೂ ಕೊರೊನಾ ತಗುಲಿತ್ತು. ಇಬ್ಬರೂ ಜೂನ್ 4 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಿಸದೆ ಇಂದು ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕಳೆದ ಏಳು ದಿನದಿಂದ ದಿನಕ್ಕೊಂದರಂತೆ ಬಲಿಯಾಗುತ್ತಿದ್ದಾರೆ. ಡೆಡ್ಲಿ ಕೊರೊನಾ ವೈರಸ್ ಇಂದು ಇಬ್ಬರ ಉಸಿರು ನಿಲ್ಲಿಸಿದೆ. ಕೊರೊನ ಸಾವಿನಿಂದ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ.