Home uncategorized ಹಾಸನ SSLC ಫಲಿತಾಂಶ - ಕಳಚಿದ ಮೊದಲ ಸ್ಥಾನದ ಪಟ್ಟ

ಹಾಸನ SSLC ಫಲಿತಾಂಶ – ಕಳಚಿದ ಮೊದಲ ಸ್ಥಾನದ ಪಟ್ಟ

ಹಾಸನ : ಕೊರೋನಾ ಆತಂಕದ ನಡುವೆ ಒಮ್ಮೆ ಮುಂದೂಡಿ ನಂತರ ಈ ಬಾರಿಯ ಎಸ್ಎಸ್ಎಲ್​ಸಿ ಪರೀಕ್ಷೆ ಫಲಿತಾಂಶ ಸೋಮವಾರ ಹೊರ ಬಿದ್ದಿದೆ. ಕೊರೋನಾ ಆತಂಕದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಿಕ್ಕ ಅವಕಾಶದಲ್ಲಿ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹ. ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಸಮಾನ ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ನಗರದ ರಾಯಲ್ ಅಪೊಲೊ ಇಂಟರ್ ನ್ಯಾಷಿನಲ್ ಸ್ಕೂಲ್ ವಿದ್ಯಾರ್ಥಿ ಶ್ರೀತೇಜ್ ಭಟ್ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದಿದ್ದರೆ, ಹಿಂದಿ, ಗಣಿತ,ಸಮಾಜ ವಿಜ್ಞಾನ ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದಾರೆ. ಉಳಿದಂತೆ ಇಂಗ್ಲಿಷ್ ಮತ್ತು ವಿಜ್ಞಾನ ವಿಷಯದಲ್ಲಿ ತಲಾ 99 ಅಂಕ ಪಡೆದಿದ್ದಾರೆ. ಎಲ್ಲಾ ವಿಭಾಗಗಳಲ್ಲೂ ‘ಎ’ ಶ್ರೇಣಿ ಪಡೆದಿರುವ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ. ಇದೇ ರೀತಿ ಚನ್ನರಾಯಪಟ್ಟಣ ತಾಲ್ಲೂಕು ಕಬ್ಬಳಿ ಬಸವೇಶ್ವರ ಪ್ರೌಢಶಾಲೆ ವಿದ್ಯಾರ್ಥಿ ದೀಪಕ್ ಎಂ.ಎಸ್. ಇದೇ ತಾಲೂಕಿನ ದಂಡಿಗನಹಳ್ಳಿ ಹೋಬಳಿ ಬೂತನೂರು ಕಾವಲು ಮಲೆನಾಡು ಒಲಂಪಿಯಾಡ್ ಪ್ರೌಢಶಾಲೆಯ ಹರ್ಷ ಎನ್.ಕೌಂಡಿನ್ಯ ಸಹ ಇದೇ ಸಾಧನೆ ಮಾಡಿದ್ದು, ಕನ್ನಡದಲ್ಲಿ 125, ಹಿಂದಿ 100, ಇಂಗ್ಲಿಷ್ 100, ಸಮಾಜ ವಿಜ್ಞಾನ 100, ಗಣಿತ 99 ಮತ್ತು ವಿಜ್ಞಾನ ವಿಷಯದಲ್ಲಿ 99 ಅಂಕ ಪಡೆದಿದ್ದಾನೆ ಮತ್ತು ಹಾಸನದ ಯುನೈಡೆಟ್ ಶಾಲೆಯ ಪೂರ್ಣಚಂದ್ರ ಅವರೂ 625 ಕ್ಕೆ 623 ಅಂಕ ಪಡೆದು ಮೇರು ಸಾಧನೆ ಮಾಡಿದ್ದಾರೆ.

ಪ್ರತಾಪ್‌ ಹಿರೀಸಾವೆ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments