ರೈತರಿಗಾಗಿ ನಿವಾಸದಲ್ಲೇ ಸಹಾಯವಾಣಿ ಆರಂಭಿಸಿದ ಹೆಚ್​ ಡಿ ಕುಮಾರಸ್ವಾಮಿ!

0
111

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯದ ರೈತರಿಗಾಗಿ ತಮ್ಮ ನಿವಾಸದಲ್ಲೇ ಸಹಾಯವಾಣಿ ಆರಂಭಿಸಿದ್ದಾರೆ. ಮಾಜಿ ಸಿಎಂ ಆರಂಭಿಸಿರುವ ಸಹಾಯವಾಣಿಗೆ ಕರೆ ಮಾಡಿ, ರೈತರು ಬೆಳೆ ಸಾಲಮನ್ನಾ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, “ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು” ಅಂತ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here