ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಗೋಲಿಬಾರ್ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಿಡಿ ಬಿಡುಗಡೆ ಮಾಡಿದ್ದಾರೆ. ಒಟ್ಟು 35 ದೃಶ್ಯಗಳು ಸಿಡಿಯಲ್ಲಿದ್ದು, ಗೋಲಿಬಾರ್ನ ಸಂಪೂರ್ಣ ದೃಶ್ಯಾವಳಿಗಳನ್ನು ಆ ಸಿಡಿ ಒಳಗೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರತಿಭಟನೆಯಂದು ಮಂಗಳೂರಿನಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸರು ಮಾಡಿರುವುದು ತಪ್ಪು. ಪೊಲೀಸರು ಅಮಾಯಕರ ಮೇಲೆ ಲಾಠಿಚಾರ್ಜ್ ಮಾಡಿದ್ದು, ಪತ್ರಕರ್ತರ ಮೇಲೂ ಹಲ್ಲೆ ಮಾಡಿದ್ದಾರೆ. ಅಲ್ಲದೆ ಬಸ್ ನಿಲ್ದಾಣದಲ್ಲಿ ಬಸ್ಗೆ ಕಾಯುತ್ತಿದ್ದವರ ಮೇಲೂ ಲಾಠಿಚಾರ್ಜ್ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಅವರ ನಡೆಯು ಅನುಮಾನಾಸ್ಪದವಾಗಿದೆ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಪ್ರತಿಭಟನೆ ತಡೆಯಲು ಪೊಲೀಸರು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದರು. ಆಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿಯ ನಿಯಂತ್ರಣಕ್ಕೆ ಗೋಲಿಬಾರ್ ನಡೆಸಿದ್ದರು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ಪೊಲೀಸರು ಒಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಪ್ರತಿಭಟನಾಕಾರರು ಆಟೋದಲ್ಲಿ ಕಲ್ಲು ತುಂಬಿಕೊಂಡು ಬಂದು ಪೂರ್ವ ಯೋಜಿತ ಕೃತ್ಯ ಎಸಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದರು. ಆದರೆ ಈಗ ಕುಮಾರಸ್ವಾಮಿ ಈ ಘಟನೆಯ ಸಂಪೂರ್ಣ ಮಾಹಿತಿಯನ್ನು ಒಳಗೊಂಡ 35 ದೃಶ್ಯಗಳ ಸಿಡಿಯನ್ನು ಬಿಡುಗಡೆ ಮಾಡಿದ್ದಾರೆ.
ಪ್ರತಿಭಟನಾಕಾರರು ಗಲಭೆಗೆ ಆಟೋದಲ್ಲಿ ಕಲ್ಲು ಸಾಗಾಟ ಮಾಡಿಲ್ಲ. ಬದಲಾಗಿ ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಹಾಜಿ ರೆಸಿಡೆನ್ಸಿ ಕಟ್ಟಡ ರಿಪೇರಿಯ ಕಸವನ್ನು ತುಂಬಿಕೊಂಡು ಹೋಗಿದ್ದ. ಆದರೆ ಅಲ್ಲಿ ಗಲಭೆ ನಡೆಯುತ್ತಿದ್ದ ಕಾರಣಕ್ಕೆ ಆಟೋ ಚಾಲಕ ಆಟೋವನ್ನು ಬಂದರು ಪ್ರದೇಶದಲ್ಲಿ ನಿಲ್ಲಿಸಿದ್ದ. ಅಷ್ಟೇ ಅಲ್ಲ ಗಲಭೆಕೋರರು ಮಂಗಳೂರಿನಲ್ಲಿ ಬಂದೂಕಿನ ಅಂಗಡಿಗೂ ನುಗ್ಗಿಲ್ಲ. ಅವರು ಅಂಗಡಿಯ ಬಾಗಿಲನ್ನು ಮಾತ್ರ ಒಡೆದು ಹಾಕಿದ್ದಾರೆ.
zithromax buy
order zithromax