Home ದೇಶ-ವಿದೇಶ ಮುಂಬೈನಲ್ಲಿ ವರುಣನ ರುದ್ರ ನರ್ತನಕ್ಕೆ 22 ಜನ ಬಲಿ

ಮುಂಬೈನಲ್ಲಿ ವರುಣನ ರುದ್ರ ನರ್ತನಕ್ಕೆ 22 ಜನ ಬಲಿ

ಮುಂಬೈ : ವಾಣಿಜ್ಯ ನಗರಿ ಮುಂಬೈ ವರುಣನ ರುದ್ರ ನರ್ತನಕ್ಕೆ ನಲುಗಿದೆ. ಮಳೆಯ ಆರ್ಭಟಕ್ಕೆ ಇದುವರೆಗೆ 22 ಮಂದಿ ಸಾವನ್ನಪ್ಪಿದ್ದು,  ಹಲವರಿಗೆ ಗಾಯಗಳಾಗಿವೆ.

ಭಾರಿ ಮಳೆಯಿಂದ ಜನ ಜೀವನ ಅಸ್ತ ವ್ಯಸ್ತವಾಗಿದೆ,. ಮಲಾಡ್​ ಈಸ್ಟ್​ನಲ್ಲಿ ಗೋಡೆ ಕುಸಿದು 13 ಮಂದಿ, ಪುಣೆಯಲ್ಲಿ ಗೋಡೆ ಕುಸಿದು 6 ಜನ ಹಾಗೂ ಕಲ್ಯಾಣ್​ನಲ್ಲಿ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಬಹಳಷ್ಟು ಆಸ್ತಿ ಪಾಸ್ತಿಗಳು ನಾಶವಾಗಿವೆ.  

ಮುಂಬೈ ಜನರಿಗೆ ಮನೆಯಿಂದ ಹೊರ ಬರದಂತೆ ಸರ್ಕಾರ ಸೂಚನೆ ನೀಡಿದ್ದು, ಎಲ್ಲಾ ಶಾಲಾ ಕಾಲೇಜು ಕಚೇರಿಗಳಿಗೆ ರಜೆ ಘೋಷಿಸಿದೆ. ಖಾಸಗಿ ಸಂಸ್ಥೆಯ ಉದ್ಯೋಗಿಗಳಿಗೆ ಮನೆಯಲ್ಲಿಯೇ ಕೂತು ಕೆಲಸ  ಮಾಡುವಂತೆ ಸೂಚಿಸಿದ್ದಾರೆ. ಇನ್ನೂ ಭಾರಿ ಮಳೆಗೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಹಲವೆಡೆ ರೈಲು ಸಂಚಾರ ರದ್ದುಮಾಡಲಾಗಿದೆ. ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ವಿಮಾನ ಸೇವೆಯಲ್ಲಿಯೂ ಕೂಡ ವ್ಯತ್ಯಯ ಉಂಟಾಗಿರುವುದರಿಂದ ವಿಮಾನಗಳ ಸಮಯವೂ ಕೂಡ ಬದಲಾಗಲಿದೆ.

ಇನ್ನು NDRFನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಕೂಡ ಮುಂಬೈ ಸೇರಿದಂತೆ ಅಕ್ಕಪಕ್ಕದ 3 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments