Home ರಾಜ್ಯ ಹೈಟೆಕ್ ಡಾ.ಅಂಬೇಡ್ಕರ್ ವಸತಿ ಶಾಲಾ ನೂತನ ಕಟ್ಟಡ ಶಂಕು ಸ್ಥಾಪನೆ!

ಹೈಟೆಕ್ ಡಾ.ಅಂಬೇಡ್ಕರ್ ವಸತಿ ಶಾಲಾ ನೂತನ ಕಟ್ಟಡ ಶಂಕು ಸ್ಥಾಪನೆ!

ಕೊಪ್ಪಳ: ಬಡ ಹಾಗೂ ಹಿಂದುಳಿದ ವರ್ಗಗಳ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಕೊಪ್ಪಳದಲ್ಲಿ ಡಾ.ಅಂಬೇಡ್ಕರ್ ವಸತಿ ನಿಲಯದ‌ ನೂತನ ಕಟ್ಟಡ ಶಂಕು ಸ್ಥಾಪನೆಯನ್ನು ಶಾಸಕ ಬಸವರಾಜ ದಡೆಸೂಗೂರು ನೆರವೇರಿಸಿದರು.

ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ-ಸಿರಿವಾರ ಗ್ರಾಮದ ಬಳಿ ಇರುವ ಸರ್ಕಾರಿ ಜಾಗದಲ್ಲಿ ಡಾ. ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಲಾಯಿತು. ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಿದ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಮಾತನಾಡಿ ಈ ಭಾಗದ ಬಡ ಹಾಗೂ ಹಿಂದುಳಿದ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಇಲ್ಲಿ ವಸತಿ ಶಾಲೆಯನ್ನು ನಿರ್ಮಾಣ ಮಾಡಲಾಗ್ತಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು ಪುರಷ ಹಾಗೂ ಮಹಿಳಾ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ, ಸ್ನಾನ, ಶೌಚಾಲಯ ಗೃಹಗಳು ಮತ್ತು ಪ್ರತ್ಯೇಕ ಅಡುಗೆ ತಯಾರಿಕಾ, ಆಹಾರ ವಸ್ತುಗಳ ದಾಸ್ತಾನು ಕೊಠಡಿ ಊಟದ ಭವನವನ್ನು ಕರ್ನಾಟಕ ಶಿಕ್ಷಣಗಳ ಸಂಸ್ಥೆ ವತಿಯಿಂದ ನಿರ್ಮಿಸಲಾಗ್ತಿದೆ. ಇದರ ಸದುಪಯೋಗವನ್ನು ವಿಧ್ಯಾರ್ಥಿಗಳು ಪಡೆದುಕೊಂಡು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಶಾಸಕ ಬಸವರಾಜ ದಡೆಸೂಗೂರು ಹೇಳಿದರು.

-ಶುಕ್ರಾಜ ಕುಮಾರ್

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments