Sunday, May 29, 2022
Powertv Logo
Homeರಾಜ್ಯನಮ್ಮ ದೇಶ ಎತ್ತ ಸಾಗುತ್ತಿದೆ?: ಹಿಜಾಬ್​​ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್​​

ನಮ್ಮ ದೇಶ ಎತ್ತ ಸಾಗುತ್ತಿದೆ?: ಹಿಜಾಬ್​​ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್​​

ಉಡುಪಿ:  ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿಯ ಹಿಜಬ್‌ ಹೋರಾಟಗಾರ್ತಿ ಆಲಿಯಾ ಅಸಾದಿ ಪ್ರಶ್ನೆ ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಹಿಜಬ್‌ ತೆಗೆದು ಹಾಲ್‌ ಟಿಕೆಟ್‌ ಪಡೆದು ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮಾ ಮಾಡಿದ ಬಳಿಕ ರಾತ್ರಿ ಟ್ವೀಟ್‌ ಮಾಡಿ ಉಡುಪಿ ಶಾಸಕ ರಘುಪತಿ ಭಟ್‌ ವಿರುದ್ಧ ಕಿಡಿಕಾರಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ನನಗೆ ಮತ್ತು ರೇಶಂಗೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ನಾವು ಮತ್ತೆ ಮತ್ತೆ ನಿರಾಸೆಗೆ ಒಳಗಾಗುತ್ತಿದ್ದಾರೆ. ಕ್ರಿಮಿನಲ್ ಕೇಸು, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸು ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? ನಮ್ಮ ದೇಶ ಎತ್ತ ಸಾಗುತ್ತಿದೆ? ಎಂದು ಹಿಜಾಬ್​​ ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

 

- Advertisment -

Most Popular

Recent Comments