Home ರಾಜ್ಯ ‘ಮೂರು ತಿಂಗಳಲ್ಲಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ’ - ಸಚಿವ ಸಿ.ಸಿ.ಪಾಟೀಲ

‘ಮೂರು ತಿಂಗಳಲ್ಲಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ’ – ಸಚಿವ ಸಿ.ಸಿ.ಪಾಟೀಲ

ಹುಬ್ಬಳ್ಳಿ: ಪ್ರತಿಭಟನೆ ಕೈಬಿಟ್ಟ ಶಿಕ್ಷಕರ ಸಂಘಟನೆಗಳು ಶಿಕ್ಷಕರು ಹಾಗೂ ಶಿಕ್ಷಣರಂಗದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಕೋವಿಡ್ ಕಾರಣದಿಂದ  ಶಿಕ್ಷಣ ಕೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳಿಂದ ಶಿಕ್ಷಕರೂ ಕೂಡ ಪರಿತಪಿಸುವಂತಾಗಿರುವುದು ಸರ್ಕಾರದ ಗಮನದಲ್ಲಿದೆ, ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಶಿಕ್ಷಕರ ಸಂಘಟನೆಗಳು ನಡೆಸುತ್ತಿರುವ ಹೋರಾಟ ಕೈಬಿಡಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ರಾಜ್ಯದ ವಿವಿಧ ಸಂಘಟನೆಗಳು ನಡೆಸುತ್ತಿರುವ ಸ್ಥಳಕ್ಕೆ ಅವರು ಸರ್ಕಾರದ ಪರವಾಗಿ ಭೇಟಿ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶಕುಮಾರ ಅವರು ನೀಡಿರುವ ಪತ್ರವನ್ನು ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರಿಗೆ ಹಸ್ತಾಂತರಿಸಿದ ಸಚಿವ ಸಿ.ಸಿ.ಪಾಟೀಲ ಅವರು, ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವುದು. ಕಾಲ್ಪನಿಕ ವೇತನ ಅನುಷ್ಠಾನದಿಂದ ಆಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ವರದಿ ತಯಾರಿಸಲಾಗುವುದು. ಅನುದಾನರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆಗೆ ಕಠಿಣ ಸುತ್ತೋಲೆಯೊಂದಿಗೆ ವಿಚಕ್ಷಣಾ ವ್ಯವಸ್ಥೆ ಮತ್ತಿತರ ಕ್ರಮಗಳ ಬಗ್ಗೆ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿ, ಸಚಿವರು ಖುದ್ದಾಗಿ ಬಂದು ಮಾತನಾಡಿರುವುದು ಸಮಾಧಾನ ತಂದಿದೆ. ಸತ್ಯಾಗ್ರಹವನ್ನು ಸದ್ಯ ಮೊಟಕುಗೊಳಿಸಲಾಗುವು ದು ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

ಪರೀಕ್ಷೆ ಬೇಡ ಅಂತ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹಿಂದಿನ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಭೌತಿಕ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ, ಇದನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್​ನಲ್ಲಿ  ಎನ್​​​ಎಸ್​​ಯುಐ ಸಂಘಟನೆ ಪ್ರತಿಭಟನೆ ನಡೆಸಿತು. ರಾಜ್ಯ...

ಸಚಿವ ಶಾಸಕರುಗಳ ಗುಪ್ತ ಗುಪ್ತ ಸಭೆ

ಚಿಕ್ಕಮಗಳೂರು : ಸಂಪುಟ ವಿಸ್ತರಣೆ ಖಾತೆ ಹಂಚಿಕೆ ಅಸಮಾಧಾನದ ಬೇಗುದಿ ಮಧ್ಯೆ ಬಿಜೆಪಿಯೊಳಗೆ ಹೊಸ ಬಂಡಾಯ ಬೂದಿ ಮುಚ್ಚಿದಂತೆ ಇದೆ ಪಕ್ಷದೊಳಗೆ ಒಂದೆರಡಲ್ಲ, ಹಲವು ಬಣಗಳು ರೂಪುಗೊಂಡಂತೆ ತೋರುತ್ತಿವೆ. ಸಚಿವ ಸ್ಥಾನ ಸಿಗದವರದ್ದು...

ಮಗಳಿಂದ ತಂದೆಯ ಅಂತ್ಯ ಸಂಸ್ಕಾರ

ಕಾರವಾರ : ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆಯ ಅಂತ್ಯ ಸಂಸ್ಕಾರವನ್ನು ಮಗಳೇ ನೆರವೇರಿಸಿದ ಘಟನೆ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ನಿಪೇಟೆಯಲ್ಲಿ ನಡೆದಿದೆ.ಕುರ್ನಿಪೇಟೆಯ ಚಂದ್ರಕಾಂತ ಬುದೊ ಪಾಗಿ (56) ಹೃದಯಾಘಾತದಿಂದ ಮೃತಪಟ್ಟಿದ್ದರು. 9...

ಉದ್ಧವ್ ಠಾಕ್ರೆ ಹೇಳಿಕೆಗೆ ಸಿಲಿಕಾನ್ ಸಿಟಿ ಮರಾಠಿಗರಿಂದ ವಿರೋಧ

ಬೆಂಗಳೂರು : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ದಿನ ದಿನಕ್ಕೆ ಪ್ರತಿಭಟನೆಗಳು ಜಾಸ್ತಿಯಾಗುತ್ತಿವೆ. ಇವತ್ತು ನಗರದ ಮೌರ್ಯ ಸರ್ಕಲ್​ನಲ್ಲಿ ಸಿಲಿಕಾನ್ ಸಿಟಿಯ ಮರಾಠಿಗರೆಲ್ಲಾ ಒಂದೆಡೆ ಸೇರಿ ತೀವ್ರ ವಿರೋಧ ವ್ಯಕ್ತ ಪಡಿಸಿದ್ರು....

Recent Comments