ಹುಬ್ಬಳ್ಳಿ : ಒಂದು ದಿನದ ಹೆಣ್ಣು ಮಗುವಿಗು ಕೊರೋನಾ ದೃಢಪಟ್ಟಿದೆ. ಕೋವಿಡ್ ಪಾಸಿಟಿವ್ ಹೊಂದಿದ ತುಂಬು ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿತ್ತು. ಹುಬ್ಬಳ್ಳಿ ತಾಲೂಕು ಉಮಚಗಿ ಗ್ರಾಮದ ತುಂಬು ಗರ್ಭಿಣಿಗೆ (25 ವರ್ಷ) 39 ವಾರಗಳು ಹಾಗೂ 04 ದಿನಗಳು ಪೂರ್ಣಗೊಂಡಿದ್ದರೂ ಸಹಜ ಹೆರಿಗೆ ಸಾಧ್ಯವಿಲ್ಲದ ಲಕ್ಷಣಗಳಿದ್ದುದರಿಂದ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿತ್ತು.
3.5 ಕೆ.ಜಿ. ತೂಕದ ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಳು. ಆ ಮಗುವಿಗೂ ಈಗ ಕೊರೋನಾ ಸೋಂಕು ದೃಢಪಟ್ಟಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.