Home uncategorized ಉಳವಿ ಮತ್ತು ಧರ್ಮಸ್ಥಳಕ್ಕೆ ನೇರ ಬಸ್ ಸಂಚಾರ ಆರಂಭ

ಉಳವಿ ಮತ್ತು ಧರ್ಮಸ್ಥಳಕ್ಕೆ ನೇರ ಬಸ್ ಸಂಚಾರ ಆರಂಭ

ಹುಬ್ಬಳ್ಳಿ : ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ಧಾರ್ಮಿಕ ಕ್ಷೇತ್ರಗಳ ಬಸ್ಸುಗಳನ್ನು ಮತ್ತೆ ಆರಂಭಿಸಲಾಗಿದೆ.
ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಉಳವಿಗೆ ಒಂದು ಬಸ್ಸು ಹಾಗೂ ಧರ್ಮಸ್ಥಳಕ್ಕೆ ಎರಡು ಬಸ್ಸುಗಳನ್ನು ಆರಂಭಿಸಲಾಗಿದೆ. ಈ ಬಸ್ಸುಗಳು ಹುಬ್ಭಳ್ಳಿ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತವೆ. ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಉಳವಿಗೆ ಹೋಗುವ ಬಸ್ಸು ಹುಬ್ಬಳ್ಳಿಯಿಂದ ಬೆಳಗ್ಗೆ 8-00 ಗಂಟೆಗೆ ಹೊರಡುತ್ತದೆ. ಧಾರವಾಡ, ಹಳಿಯಾಳ, ದಾಂಡೇಲಿ, ಜೊಯಿಡಾ, ಕುಂಬಾರವಾಡ ಮಾರ್ಗವಾಗಿ ಮಧ್ಯಾಹ್ನ 1-00 ಗಂಟೆಗೆ ಉಳವಿ ತಲುಪುತ್ತದೆ. ಉಳವಿಯಿಂದ 2-00 ಗಂಟೆಗೆ ಹೊರಟು ಅದೇ ಮಾರ್ಗದಲ್ಲಿ ಸಂಜೆ 6-30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ.

ಧರ್ಮಸ್ಥಳಕ್ಕೆ ಹಗಲು ಬಸ್ಸು ಅಂಕೋಲಾ ಮಾರ್ಗವಾಗಿ ಮತ್ತು ರಾತ್ರಿ ಬಸ್ಸು ಶಿರಸಿ ಮಾರ್ಗವಾಗಿ ಒಟ್ಟು ಎರಡು ಬಸ್ಸುಗಳು ಹೊರಡುತ್ತವೆ.

ಹುಬ್ಬಳ್ಳಿಯಿಂದ ಬೆಳಗ್ಗೆ 07-00ಕ್ಕೆ ಹೊರಡುವ ಬಸ್ಸು ಯಲ್ಲಾಪುರ, ಅಂಕೋಲಾ, ಕುಮಟಾ, ಉಡುಪಿ ಮಾರ್ಗವಾಗಿ ಸಂಜೆ 6-30ಕ್ಕೆ ಧರ್ಮಸ್ಥಳ ತಲುಪುತ್ತದೆ. ಮರುದಿನ ಬೆಳಿಗ್ಗೆ 5-30ಕ್ಕೆ ಧರ್ಮಸ್ಥಳದಿಂದ ಹೊರಟು ಸಂಜೆ 4-30ಕ್ಕೆ ಹುಬ್ಬಳ್ಳಿ ತಲುಪುತ್ತದೆ.

ಸಂಜೆ 6-15ಕ್ಕೆ ಹುಬ್ಬಳ್ಳಿಯಿಂದ ಹೊರಡುವ ಬಸ್ಸು ಮುಂಡಗೋಡ, ಶಿರಸಿ, ಕುಮಟಾ, ಉಡುಪಿ ಮಾರ್ಗವಾಗಿ ಮರುದಿನ ಬೆಳಿಗ್ಗೆ 5-30ಕ್ಕೆ ಧರ್ಮಸ್ಥಳ ತಲುಪುತ್ತದೆ. ಧರ್ಮಸ್ಥಳದಿಂದಲೂ ಸಂಜೆ 6-15ಕ್ಕೆ ಹೊರಟು ಮರುದಿನ ಬೆಳಿಗ್ಗೆ 5-30ಕ್ಕೆ ಹುಬ್ಬಳ್ಳಿ ತಲುಪುತ್ತದೆ.

ಸಾರ್ವಜನಿಕರು ಸದರಿ ಬಸ್ಸುಗಳ ಸದುಪಯೋಗ ಪಡೆದುಕೊಳ್ಳಲು ಕೋರಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ, ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ಮುಂದಿನ ದಿನಗಳಲ್ಲಿ ದೂರ ಮಾರ್ಗದ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments