ಹಳೇ ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹೇಳಿದ್ದಾರೆ .
ಸೂಕ್ತ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿದೆ. ಗಲಾಟೆಯಲ್ಲಿ 12ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಕೆಲ ಆರೋಪಿಗಳನ್ನೂ ಬಂಧಿಸಲಾಗಿದೆ. ಪೊಲೀಸರು ಎಷ್ಟು ಮನವಿ ಮಾಡಿದರೂ ಕಲ್ಲು ತೂರಾಟ ಮುಂದುವರಿಸಿದ್ರು . ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು .
ಪ್ರಕರಣ ಸಂಬಂಧ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ವಶದಲ್ಲಿರುವ ಯುವಕರ ಸಂಬಂಧಿಕರು ಪೊಲೀಸ್ ಠಾಣೆಗೆ ಬಂದು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.