ಬೆಂಗಳೂರು : ಕೊರೋನಾದಿಂದ ಸ್ಯಾಂಡಲ್ವುಡ್ ಹಿರಿಯ ನಟ ಹುಲಿವಾನ್ ಗಂಗಾಧರ್ (70)ನಿಧನರಾಗಿದ್ದಾರೆ.
ಸಿನಿಮಾ ಮತ್ತು ಧಾರವಾಹಿಗಳ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ಗಂಗಾಧರ್ ಅವರು ಕೊರೋನಾ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಶಬ್ಧವೇದಿ, ಅಪ್ಪು, ಕುರಿಗಳು ಸಾರ್ ಕುರಿಗಳು, ಕರ್ವ ಸೇರಿದಂತೆ 118ಕ್ಕೂ ಹೆಚ್ಚು ಸಿನಿಮಾಗಳಲ್ಲಿ, 1500ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದರು. ಕೃಷ್ಣ ತುಳಸಿ ಧಾರವಾಹಿ ಸೇರಿದಂತೆ ಇತ್ತೀಚಿನವರೆಗೂ ಸಾಕಷ್ಟು ಧಾರವಾಹಿಗಳಲ್ಲಿ ನಟಿಸಿದ್ದರು.