ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು.
ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ ಬಗ್ಗೆ ತಮ್ಮದೇ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ದೇಶದ ಕನಸುಗಳು ದೊಡ್ಡದಾಗಿದೆ. ಆದರೆ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ 1.5 ಕೋಟಿ ಹುದ್ದೆಗಳು ಖಾಲಿ ಇದ್ದರೂ ನಿರುದ್ಯೋಗಿಗಳು ಹೆಚ್ಚುತ್ತಿದ್ದಾರೆ.
ಕೋಟ್ಯಂತರ ನಿರುದ್ಯೋಗಿಗಳಿಗೆ ಮುಂದೆ ಏನಾಗುತ್ತದೆ ಎಂದು ತಿಳಿದಿಲ್ಲ ಎಂದು ಕಿಡಿಕಾರಿದರು.ನಮ್ಮ ಹೋರಾಟ ಉದ್ಯೋಗ ಮತ್ತು ಆರ್ಥಿಕ ಸಮಾನತೆಗಾಗಿ ಆಗಿದೆ. ಸಂವಿಧಾನವು ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಪಡೆಯಬೇಕೆಂದು ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಶ್ರಮಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.