ದುಬೈ: ಐಸಿಸಿ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನಕ್ಕೆ ಕುಸಿದಿದ್ದು, ಕೆ.ಎಲ್ ರಾಹುಲ್ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ನ್ಯೂಜಿಲೆಂಡ್ ಸರಣಿ ಬಳಿಕ ವಿರಾಟ್ ಕೊಹ್ಲಿ ಒಂದು ಸ್ಥಾನ ಇಳಿಕೆ ಕಂಡಿದ್ದು, 10 ನೇ ಸ್ಥಾನಕ್ಕೆ ಇಳಿದಿದ್ದಾರೆ. ದಕ್ಷಿಣ ಆಫ್ರಿಕಾ – ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಇಂಗ್ಲೆಂಡ್ ಕ್ಯಾಪ್ಟನ್ ಇಯಾನ್ ಮಾರ್ಗನ್ 136 ರನ್ ಗಳಿಸಿ ಒಂದು ಸ್ಥಾನ ಏರಿಕೆ ಕಂಡು 9ನೇ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾ 11ನೇ ಸ್ಥಾನ ಗಳಿಸಿದ್ದಾರೆ.
ಪಾಕಿಸ್ಥಾನದ ಬಾಬರ್ ಆಜಂ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಬಾಬರ್ & ಕೆ.ಎಲ್ ರಾಹುಲ್ ಮಧ್ಯೆ 56 ಅಂಕಗಳ ಅಂತರವಿದ್ದು, ಈ ಮೊದಲು ಬಿಡುಗಡೆ ಮಾಡಿದ್ದ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕು ಸ್ಥಾನಗಳ ಏರಿಕೆ ಕಂಡು ಎರಡನೇ ಸ್ಥಾನವನ್ನು ಪಡೆದಿದ್ದರು. ಈ ಬಾರಿಯೂ ಅವರು ಆ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ.
ಇನ್ನು ಬೌಲಿಂಗ್ ರ್ಯಾಂಕಿಂಗ್ನ ಟಾಪ್ 10 ಪಟ್ಟಿಯಲ್ಲಿ ಭಾರತದ ಯಾವುದೇ ಬೌಲರ್ನ ಹೆಸರು ಸೇರಿಕೊಂಡಿಲ್ಲ. ಮೊದಲೆರಡು ಸ್ಥಾನದಲ್ಲಿ ಅಫ್ಘಾನಿಸ್ಥಾನದ ರಶೀದ್ ಖಾನ್ ಮತ್ತು ಮುಜೀಬುರ್ ರೆಹಮಾನ್ ಇದ್ದಾರೆ. ಟಿ20 ಆಲ್ರೌಂಡರ್ ಆಗಿ ಅಗ್ರಸ್ಥಾವನ್ನು ಅಫ್ಘಾನಿಸ್ಥಾನದ ಮೊಹಮ್ಮದ್ ನಬಿ ಕಾಯ್ದುಕೊಂಡಿದ್ದಾರೆ.