Home ರಾಜ್ಯ ಆಗಸ್ಟ್ 10 ರಂದು ಸಾರಿಗೆ ನೌಕರರ ಪ್ರತಿಭಟನೆ

ಆಗಸ್ಟ್ 10 ರಂದು ಸಾರಿಗೆ ನೌಕರರ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್​ ಆಗಸ್ಟ್ 10 ರಂದು ಎಲ್ಲಾ ವಿಭಾಗೀಯ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದೆ. 

ಸಾರಿಗೆ ನೌಕರರ ಬೇಡಿಕೆಗಳು:

ಸಿಬ್ಬಂದಿಯ ಖಾತೆಯಲ್ಲಿ ಇರುವ ರಜೆಯನ್ನು ಕಡಿತಗೊಳಿಸದೆ, ಪ್ರತಿ ತಿಂಗಳ 7ನೇ ತಾರೀಖಿನೊಳಗೆ ವೇತನವನ್ನು ನೀಡಬೇಕು.

ತುಟ್ಟಿ ಭತ್ಯೆಯನ್ನು ನೀಡಬೇಕು. EL ನಗದೀಕರಣ ನೀಡಬೇಕು.

ವೈದ್ಯಕೀಯ ಮರುಪಾವತಿ ಮಾಡಬೇಕು.

ಸಾರಿಗೆ ನಿಗಮಗಳಿಗೆ, ವಿದ್ಯಾರ್ಥಿ ಮತ್ತಿತರ ಪಾಸ್ ಹಣದ ಬಾಬ್ತು, 3 ಸಾವಿರ ಕೋಟಿ ನೀಡಬೇಕು.

ಕೋವಿಡ್- 19 ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ಸಾರಿಗೆ ನಿಗಮಗಳಿಗೆ ಕನಿಷ್ಠ ರೂ, 50 ಕೋಟಿ ಸಂಕಷ್ಟ ಧನ ಸಹಾಯ ನೀಡಬೇಕು.

ನಿವೃತ್ತ ಕಾರ್ಮಿಕರಿಗೆ ನೀಡಬೇಕಾಗಿರುವ ಹಣವನ್ನು ಕೂಡಲೇ ನೀಡಬೇಕು.

ಕಾರ್ಮಿಕ ವಿರೋಧಿಯಾಗಿರುವ ಎಲ್ಲಾ ಸುತ್ತೋಲೆಗಳನ್ನು ವಾಪಸ್ ಪಡೆಯಬೇಕು.

ಸಾರಿಗೆ ನಿಗಮಗಳಿಗೆ ಡೀಸೆಲ್ ಮತ್ತಿತರ ತೈಲ ಉತ್ಪನ್ನಗಳನ್ನು ರಿಯಾಯಿತಿ ದರದಲ್ಲಿ ನೀಡಬೇಕು ಮತ್ತು ಅದನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು.

FAME 1 ಮತ್ತು 2ರ ಅಡಿಯಲ್ಲಿ ವಿದ್ಯುತ್ ವಸ್ತುಗಳನ್ನು ಸಾರಿಗೆ ನಿಗಮಗಳು ನಿರ್ವಹಿಸುವಂತಾಗಬೇಕು.

ಬಜೆಟ್ ಬೆಂಬಲ ನೀಡುವ ಮೂಲಕ ಸಾರಿಗೆ ನಿಗಮಗಳನ್ನು ಸಂರಕ್ಷಿಸಬೇಕು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments