Home ರಾಜ್ಯ ಬೆಂಗಳೂರು ಚಿತ್ರದುರ್ಗದಲ್ಲಿ: ಮಹಿಳೆಯ ಬರ್ಬರ ಹತ್ಯೆ

ಚಿತ್ರದುರ್ಗದಲ್ಲಿ: ಮಹಿಳೆಯ ಬರ್ಬರ ಹತ್ಯೆ

ಚಿತ್ರದುರ್ಗ: ಪ್ರೀತಿಸುತ್ತಿದ್ದ ಯುವತಿ ಬೇರೆಯವನೊಂದಿಗೆ ಮದುವೆಯಾದ ವಿಚಾರವಾಗಿ ರೇಗಿಸುತ್ತಿದ್ದ ಯುವಕನ ಹತ್ಯೆಗೆ ಹಾಕಿದ್ದ ಸ್ಕೆಚ್ ಗೆ ಆತನ ತಾಯಿ ಬಲಿಯಾಗಿರುವ ಘಟನೆ ನಡೆದಿದೆ. ಹೊರಪೇಟೆ ಬಡಾಮಕಾನ್​ನಲ್ಲಿ ಭೀಕರ ಹತ್ಯೆ ನಡೆದಿದ್ದು, ಮೃತಳ ಮಗ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಇನ್ನೂ ಆರೋಪಿ ಇಮ್ತಿಯಾಜ್ ಎಂಬಾತ ಹೊಸದುರ್ಗ ಮೂಲದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ, ಆದರೆ ಆತನ ಪ್ರಿಯತಮೆ ಇಮ್ತಿಯಾಜ್ ಬಿಟ್ಟು ಬೇರೆ ಮದುವೆಯಾಗಿದ್ದಳು. ಈ ವಿಚಾರವಾಗಿ ಕೊಲೆಯಾಗಿರುವ 43 ವರ್ಷದ  ಫರ್ಹಾನಾ ಬಾಬು ಮಗ ಮೆಹಫೂಸ್ ಇಲಾಹಿ ಎಂಬಾತ ರೇಗಿಸುತ್ತಿದ್ದ ಎಂಬ ಕಾರಣಕ್ಕೆ ಇಮ್ತಿಯಾಜ್ ಕೊಲೆ ಮಾಡಲು ಸ್ಕೆಚ್ ಹಾಕಿದ್ದ.

ನಿನ್ನೆ ರಾತ್ರಿ 10:30ರ ಸುಮಾರಿಗೆ ಫರ್ಹಾನಾ ಬಾನು ಮನೆ ಮೇಲೆರಿದ ಇಮ್ತಿಯಾಜ್ ಮನೆ ಮೇಲೆ ಇದ್ದ ನೀರಿನ ಟ್ಯಾಂಕ್​ನ ಗೇಟ್ ಬಂದ್ ಮಾಡಿದ್ದಾನೆ. ನಲ್ಲಿಯಲ್ಲಿ ನೀರು ಯಾಕೆ ಬರುತ್ತಿಲ್ಲ ಎಂದು ತಾಯಿ ಜೊತೆ ಮೆಹಫೂಸ್ ಇಲಾಹಿ ಮೆಟ್ಟಿಲೇರುತ್ತಿದ್ದಂತೆ ಇಮ್ತಿಯಾಜ್ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಈ ವೇಳೆ ಮಗನನ್ನು ರಕ್ಷಿಸಲು ಮುಂದಾದ ಫರ್ಹಾನ ಬಾನುವಿಗೆ ಹಲವಾರು ಬಾರಿ ಚಾಕುವಿನಿಂದ ಇರಿದು  ಮೆಟ್ಟಿಲಿನಿಂದ ಕೆಳಗೆ ನೂಕಿದ ಬಳಿಕ ಇಲಾಹಿಯ ಮೇಲು ದಾಳಿ ಮಾಡಿದ್ದಾನೆ. ಅರಚಾಟ ಕಿರುಚಾಟದ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಜಮಾಯಿಸುತ್ತಿದ್ದಂತೇ ಆರೋಪಿ ಇಮ್ತಿಯಾಜ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ತಾಯಿ ಮಗನನ್ನು ನೋಡಿದ ಅಕ್ಕಪಕ್ಕದ ಮನೆಯವರು ಕೂಡಲೇ ಜಿಲ್ಲಾಸ್ಪತ್ರೆ ಸಾಗಿಸಿದ್ದಾರೆ, ಆದರೆ ಮಾರ್ಗ ಮಧ್ಯೆಯೇ ಫರ್ಹಾನಾ ಬಾನು ಮೃತಪಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮೃತಳ ಮಗ ಮೆಹಫೂಸ್ ಇಲಾಹಿಗೆ ಜಿಲ್ಲಾಸ್ಪತ್ರೆ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಗರ ಠಾಣೆ ಪೊಲೀಸರು ಈಗಾಗಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

ರಾಜಧಾನಿಯಲ್ಲಿ ಟ್ಯ್ರಾಕ್ಟರ್ ರ್ಯಾಲಿ..!

ಬೆಂಗಳೂರು: ರೈತರ ಮೂರು ಕೃಷಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಟ್ಯ್ರಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಎಲ್ಲ ಜಿಲ್ಲೆಗಳಿಂದಲೂ ರೈತರು ರಾಜಧಾನಿಗೆ ಟ್ಯ್ರಾಕ್ಟರ್ ನಲ್ಲಿ ಆಗಮಿಸುತ್ತಿದ್ದಾರೆ. ಇಂದು ನೈಸ್ ರಸ್ತೆ ಬಳಿಯ ಇರುವ...

Recent Comments