Home ರಾಜ್ಯ ರಾಜ್ಯದಲ್ಲಿ ಧಾರಾಕಾರ ಮಳೆ ; ರೆಡ್​ ಅಲರ್ಟ್​ ಘೋಷಣೆ..!

ರಾಜ್ಯದಲ್ಲಿ ಧಾರಾಕಾರ ಮಳೆ ; ರೆಡ್​ ಅಲರ್ಟ್​ ಘೋಷಣೆ..!

ಬೆಂಗಳೂರು : ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು  ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. 7 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆಯಾಗಿದೆ.

ನೈರುತ್ಯ ಮುಂಗಾರು ಮಾರುತಗಳು ಪ್ರಬಲವಾಗಿದ್ದು, ದೇಶದ ಪಶ್ಚಿಮ ಕರಾವಳಿ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

ಶಿವಮೊಗ್ಗ :  ಜಿಲ್ಲಾದ್ಯಂತ ವರುಣನ ಆರ್ಭಟ ಜೋರಾಗಿದೆ.  ಸಾಗರದಲ್ಲಿ ತೋಟಗಳಿಗೆ ವರದಾ ನದಿ ನೀರು ನುಗ್ಗಿದೆ. ನದಿ ಪಾತ್ರಗಳ ಗದ್ದೆ, ಜಮೀನುಗಳು ಜಲಾವೃತಗೊಂಡಿದ್ದು, ಬೆಳೆನಾಶದಿಂದ ರೈತರು ಕಂಗಾಲಾಗಿದ್ದಾರೆ.

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಭದ್ರಾನದಿ ಉಕ್ಕಿ ಹರಿಯುತ್ತಿದೆ. ಹೆಬ್ಬಾಳ ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ತುಂಬಿ ಹರಿಯುತ್ತಿದೆ.  ಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಕಳಸ – ಹೊರನಾಡು ಸಂಪರ್ಕ ಕಡಿತಗೊಂಡಿದೆ.  ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಸಚಿವ ಸಿ.ಟಿ ರವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊಡಗು : ಜಿಲ್ಲೆಯಲ್ಲಿ ವರುಣ ಅವಾಂತರ ಸೃಷ್ಟಿಸಿದ್ದಾನೆ. ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದಿದೆ. 2 ಮನೆಗಳ ಮೇಲೆ ಬೆಟ್ಟ ಕುಸಿದಿದೆ. 7 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ದೇವಸ್ಥಾನದ ಅರ್ಚಕ ಕುಟುಂಬದವರಾಗಿದ್ದು, ಇಬ್ಬರು ಅರ್ಚಕರು ಸೇರಿ ಐವರು ಮಣ್ಣಿನಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಪ್ರಧಾನ ಅರ್ಚಕ ನಾರಾಯಣ ಆಚಾರ್, ಪತ್ನಿ ಶಾಂತಾ, ಅಡುಗೆ ಸಿಬ್ಬಂದಿ ಹಾಗೂ ಮತ್ತೋರ್ವ ಅರ್ಚಕ ಮಣ್ಣಿನಲ್ಲಿ ಸಿಲುಕಿರುವ ಸಾಧ್ಯತೆ ಇದೆ. ಸ್ಥಳಕ್ಕೆ ಎನ್​ಡಿಆರ್​​ ಎಫ್ ತಂಡ ಆಗಮಿಸಿದ್ದು,ಶೋಧ ಕಾರ್ಯ ನಡೆಸುತ್ತಿದೆ.

ಮೈಸೂರು : ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಮೈಸೂರಿನಲ್ಲಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ನದಿಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ಸಿಂಡೇನಹಳ್ಳಿ, ಅಬ್ಬೂರು, ನೇಗತ್ತೂರು, ಬಿಲ್ಲೇನ ಹೊಸಹಳ್ಳಿಯಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ.  ಮುಸುಕಿನ ಜೋಳ, ಶುಂಕಿ, ಬೆಳೆ ನೀರು ಪಾಲಾಗಿದೆ. ತೆಪ್ಪದ ಮೂಲಕ ಜೀವದ ಹಂಗು ತೊರೆದು ಬೆಳೆ ರಕ್ಷಿಸಿಕೊಳ್ಳಲು ಅನ್ನದಾತರು ಮುಂದಾಗಿದ್ದಾರೆ.

ಹಾಸನ :  ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಹೇಮಾವತಿ ನದಿ ಪ್ರವಾಹಕ್ಕೆ ಸಕಲೇಶಪುರ ಪಟ್ಟದಲ್ಲಿರುವ ಶಿವದೇವಸ್ಥಾನ ಮುಳುಗಡೆಯಾಗಿದೆ.

ಬೆಳಗಾವಿ :  ಕಳೆದ 4 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿರಲಾಗದೆ ಜನ ಮನೆ ಖಾಲಿ ಮಾಡುತ್ತಿದ್ದಾರೆ.

ಹಾವೇರಿ : ವರುಣನ ಆರ್ಭಟದಿಂದ ಮದಗಮಾಸೂರು ಕೆರೆ ಮೈದುಂಬಿ ಹರಿಯುತ್ತಿದೆ. ಹಿರೇಕೆರೂರು ತಾಲ್ಲೂಕಿನ ಮಾಸೂರು ಗ್ರಾಮದ ಬಳಿ ಇರೋ ಈ ಕೆರೆ ಕೆಂಚಮ್ಮನ ಕೆರೆ ಎಂದೇ ಪ್ರಸಿದ್ಧಿ.

 ಹೀಗೆ ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ.  ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್, “ ಜಿಲ್ಲೆಯಲ್ಲೇ ಇದ್ದು ಮಳೆ ಹಾನಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಿ, ಶಾಸಕರು, ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರಿ’’ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯ ಕೊವಿಡ್​​ನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು, ಆಸ್ಪತ್ರೆಯಿಂದಲೇ ಫೋನ್​ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments