Home ರಾಜ್ಯ ‘ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ’

‘ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆ’

ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಫವೇಂದ್ರ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಸಮಾರಂಭದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಇದುವರೆಗೆ 22 ಇದ್ದ ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44 ಕ್ಕೆ ಹೆಚ್ಚಿಸಲಾಗಿದೆ. 423 ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು, ಒಂದು ವರ್ಷದ ಒಳಗಾಗಿ ಪೂರ್ಣಗೊಳ್ಳಲಿದೆ. 516 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ದಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ ಎಂದರು. 

ಶಿವಮೊಗ್ಗ ನಗರದ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ವಿದ್ಯಾನಗರದ ಬಳಿ ವಿನೂತನವಾದ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾರ್ಯ 44 ಕೋಟಿ ರೂ. ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ.  ನಿಟ್ಟೂರು ಮತ್ತು ಹೊಸನಗರ ಭಾಗದಲ್ಲಿ ಶಿಥಿಲಗೊಂಡಿರುವ 7 ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ 19 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.  96 ಕೋಟಿ ರೂ. ವೆಚ್ಚದಲ್ಲಿ ಸೊಲ್ಲಾಪುರ-ಮಂಗಳೂರು ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು. 

ತೀರ್ಥಹಳ್ಳಿ-ಉಡುಪಿ ರಸ್ತೆಯಲ್ಲಿ 8.20 ಕೋಟಿ ರೂ ವೆಚ್ಚದಲ್ಲಿ 3 ಕಿರು ಸೇತುವೆ ನಿರ್ಮಾಣ, ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 7 ಕಿರು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಿಆರ್ ಎಫ್ ಯೋಜನೆಯಡಿ ಇನ್ನೂ 400 ಕೋಟಿ ರೂ. ಯೋಜನೆಗಳ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು. 

ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರು ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಜ್ಯದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿದೆ. 5,612 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‍ವೈ ಯೋಜನೆಯಡಿ 3660 ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಕೃಷಿ ಕಾಯ್ದೆಯನ್ನು ರದ್ದು ಮಾಡುವುದಿಲ್ಲ: ನರೇಂದ್ರ ಸಿಂಗ್ ತೋಮರ್

ದೆಹಲಿ: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಒಂದೂವರೆ ತಿಂಗಳಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರೊಟೆಸ್ಟ್ ನಡೆಸುತ್ತಿವೆ. ಇದರ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ದೇಶದ ಹೆಚ್ಚಿನ ರೈತರು...

‘ನಾಳೆ ಸಿಎಂ ಯಡಿಯೂರಪ್ಪ ಉಡುಪಿ ಪ್ರವಾಸ’

ಬೆಂಗಳೂರು: ನಾಳೆ ನಾಡಿದ್ದು ಸಿಎಂ ಬಿಎಸ್ ಯಡಿಯೂರಪ್ಪ ಉಡುಪಿ ಪ್ರವಾಸ ಮಾಡಲಿದ್ದಾರೆ. ನಾಳೆ ಸಂಜೆ ಮಧ್ಯಾಹ್ನ 3 ಗಂಟೆಗೆ ಹೆಚ್ ಎ ಎಲ್ ನಿಂದ ಪ್ರಯಾಣ ಬೆಳೆಸಿ, ಸಂಜೆ 5 ಗಂಟೆಗೆ ಪರ್ಯಾಯ...

‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ’

ಬೆಂಗಳೂರು: ವಿರೋಧ ಪಕ್ಷಗಳ ವಿರೋಧದ ನಡುವೆಯೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದ್ದು,  ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ  ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ವಿಷಯ ಪ್ರಕಟಿಸಿದೆ. ಇನ್ನೂ...

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು...

Recent Comments