Home ರಾಜ್ಯ ಉಪವಾಸ ಮತ್ತು ಮೌನಾಚರಣೆ ಮೂಲಕ ಸ್ವಾತಂತ್ರ್ಯ ದಿನಾಚರಣೆ ..!

ಉಪವಾಸ ಮತ್ತು ಮೌನಾಚರಣೆ ಮೂಲಕ ಸ್ವಾತಂತ್ರ್ಯ ದಿನಾಚರಣೆ ..!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸವನಹಳ್ಳಿ ಯಲ್ಲಿ ಗ್ರಾಮದಲ್ಲಿ ಇಂದು 74 ನೇ ಸ್ವಾತಂತ್ರ್ಯ ದಿನಾಚರಣೆ  ಪ್ರಯುಕ್ತ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉಪವಾಸ ಸತ್ಯಾಗ್ರಹ ಮತ್ತು 24 ಗಂಟೆಗಳ ಮೌನ ದಿನಾಚರಣೆಯನ್ನು ಆರಂಭಿಸಿದ್ದಾರೆ. ಗಾಂಧೀಜಿಯವರ ಮಾರ್ಗ,ಅವರ ಆದರ್ಶಗಳನ್ನು ಇಂದು ಪಾಲಿಸಿದರೆ ಜಗತ್ತಿನಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಪ್ರಕೃತಿಯೇ ನಿಜವಾದ ಗುರು. ಪ್ರಕೃತಿಯನ್ನು ಸ್ವಾರ್ಥಕ್ಕೆ ಬಳಸಿಕೊಂಡ ಪರಿಣಾಮವೇ ಕೊರೋನ ರೋಗ ಇಡೀ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿದೆ. ಗಾಂಧೀಜಿಯವರ ಸರಳ ಜೀವನ, ಗ್ರಾಮಗಳ ಉದ್ದಾರ, ಗ್ರಾಮೀಣ ಕೈಗಾರಿಕೆಗಳು, ಅಸ್ಪೃಶ್ಯತೆ ನಿವಾರಣೆ,ನಯೀ ತಾಲೀಮ್, ಸಹಕಾರ ಮನೋಭಾವ, ಧರ್ಮ ಸಹಿಷ್ಣುತೆ, ಸಹ ಜೀವನ, ಸರ್ವೋದಯ ತತ್ವಗಳನ್ನು ಪಾಲಿಸುವ ಮೂಲಕ ದೇಶದ ಉದ್ದಾರ ಮಾಡಬೇಕೆಂಬ ಕರೆಯನ್ನು ಯುವ ವರ್ಗದಲ್ಲಿ ಬಿತ್ತಲು ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅಂತ ಸಾಮಾಜಿಕ ಹೋರಾಟಗಾರ ಕಸವನಹಳ್ಳಿ ರಮೇಶ್​ರವರು ಉಪವಾಸ ಮತ್ತು ಮೌನ ದಿನಾಚರಣೆ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ಈ ಉಪನ್ಯಾಸಕರಾದ ವೆಂಕಟೇಶ ಟಿ.ಎನ್, ಶಿಕ್ಷಕರಾದ ನಾಗರಾಜು, ಬುಡೆನ್ ಸಾಬ್, ಕಾಸಿಂಸಾಬ್, ಜಗನ್ನಾಥ್,ನರಸಿಂಹಯ್ಯ, ಅಜ್ಜಯ್ಯಆಲೂರ್, ರಾಮಚಂದ್ರಕಸವನಹಳ್ಳಿ ಹಾಗೂ ಕಸವನಹಳ್ಳಿ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments